ಜಿಲ್ಲಾ ಸುದ್ದಿ

ಸಿಎಂ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಸಿಎಂ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಮೆಚ್ಚಿಸುವ ಸಲುವಾಗಿ ಇನ್ನಿಲ್ಲದ ಭರವಸೆಗಳನ್ನು ನೀಡಿ ಜನರ ಕಣ್ಣಿಗೆ ಮಣ್ಣೇರಚೋ ಕೆಲಸ ಮಾಡುತ್ತಿದ್ದು, ಇದನ್ನು ಮಾಡುವ ಬದಲು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಮಾಜಿ ಸಚಿವ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದು ಒಂದು ವರ್ಷ ನಾಲ್ಕು ತಿಂಗಳು ಕಳೆದಿದೆ. ಆದರೆ ಸರ್ಕಾರ ಇದೂವರೆಗೂ ಯಾವುದೇ ಅಭಿವೃದ್ಧಿ ಕಾರ್ಯವನ್ನು ಕೈಗೊಂಡಿಲ್ಲ. ರಾಜಕೀಯಕ್ಕೆ ಕಾಲಿಟ್ಟಾಗಿನಿಂದಲೂ ಸಿದ್ದರಾಮಯ್ಯ ಹೋರಾಟದ ಮನೋಭಾವದಿಂದಲೇ ಮೇಲೆ ಬಂದವರು, ಅಂತಹ ಸಿದ್ದರಾಮಯ್ಯ ಅವರ ಕೈಯಲ್ಲಿ ಅಧಿಕಾರವಿದ್ದರು ಸಾಮಾಜಿಕ ಕಳಕಳಿ ಎಲ್ಲಿಹೋಯಿತು ಎಂದು ಪ್ರಶ್ನಿಸಿದ್ದಾರೆ?....

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ ಪಕ್ಷದವರೇ ಪ್ರಧಾನಮಂತ್ರಿಗಳಾಗಿದ್ದಾರೆ. ಇವತ್ತು ಅಧಿಕಾರಿದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿದ್ದುಕೊಂಡು ಸಮಾಜದ ಬಗ್ಗೆ ಯೋಚನೆ ಮಾಡದೆ, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡದೆ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿರುವ ಅವರು ಕುರ್ಚಿಗಾಗಿ ಸೋನಿಯಾ ಗಾಂಧಿಯನ್ನು ಮೆಚ್ಚಿಸಲು ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಕಾಲಿಟ್ಟಾಗ ನೀಡಿದ್ದ 165 ಭರವಸೆಗಳಲ್ಲಿ 90 ಭರವಸೆಗಳನ್ನು ಈಗಾಗಲೇ ಈಡೇರಿಸುವುದಾಗಿ ಹೇಳಿರುವ ಸಿದ್ದರಾಮಯ್ಯ, ಅದು ಎಷ್ಟರ ಮಟ್ಟಿಗೆ ಅನುಷ್ಠಾನಕ್ಕೆ ಬಂದಿದೆ ಎಂಬುದರ ಈ ಕುರಿತು ಶ್ವೇತ ಪತ್ರ ಹೊರಡಿಸುವಂತೆ ಆಗ್ರಹಿಸಿದ್ದಾರೆ.

ಇದೇ ವೇಳೆ, ಕಾಂಗ್ರೆಸ್‌ನ ಭಾಗ್ಯ ಯೋಜನಗಳಾದ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ, ಕೇಬಲ್‌ಭಾಗ್ಯವೆಲ್ಲವೂ ಜನರ ದೌರ್ಭಾಗ್ಯವಾಗಿದ್ದು, ಸರ್ಕಾರದ ಯೋಜನೆಗಳು ಜನರಿಗೆ ಅನುಕೂಲವಾಗುವಂತಹ ಯೋಜನೆಗಳಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜನರು ರಾಜ್ಯದಲ್ಲಿ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಎಂದು ಪ್ರಶ್ನಿಸುವ ಪರಿಸ್ಥಿತಿ ಎದುರಾಗಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಸ್ವಜನ ಪಕ್ಷಪಾತ ಮಾಡುತ್ತಿರುವ ಸಿಎಂರವರು ಮೊದಲು ನರೇಂದ್ರ ಮೋದಿಯವರನ್ನು ಟೀಕಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ನಂತರ ಮಾತನಾಡಿದ ಬಿಜೆಪಿ ಮಾಜಿ ಶಾಸಕ ಗೋಪಾಲಕೃಷ್ಣ, ಕಾಂಗ್ರೆಸ್ ಸರ್ಕಾರದ ವ್ಯವಸ್ಥೆಯ ಕುರಿತು ಜನರಲ್ಲಿ ಅಸಮಾಧಾನವಿದೆ. ಸ್ಪೀಕರ್ ಕಾಗೋಡು ತಿಮ್ಮಪ್ಪರವರ ಕ್ಷೇತ್ರವಾಗಿರುವ ಸಾಗರದಲ್ಲಿ ಅತಿವೃಷ್ಠಿ, ಅನಾವೃಷ್ಠಿಗಳಿಗೆ ಸಂಭವಿಸಿದ್ದರು ಅದಕ್ಕೆ ಪರಿಹಾರ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷದವರೇ ಪ್ರತಿಭಟಿಸಿದ್ದರು ಎಂದರು. ಅಲ್ಲದೆ ಕಾಂಗ್ರೆಸ್ ಸರ್ಕಾರ ನಡೆಸುವಲ್ಲಿ ವಿಫಲವಾಗಿದ್ದು, ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.