ಕಾರ್ತಿಕ್ ಗೌಡ ವಿರುದ್ಧ ಮೈತ್ರಿಯಾ ದೂರು

ಬೆಂಗಳೂರು: ಕೇಂದ್ರ ಸಚಿವ ಡಿ.ವಿ ಸದಾನಂದಾಗೌಡ ಪುತ್ರ ಕಾರ್ತಿಕ್ ಗೌಡ ವಿರುದ್ಧ ನಟಿ ಮೈತ್ತಿಯಾ ದೂರು ದಾಖಲಿಸಿದ್ದಾರೆ.
ಕಾರ್ತಿಕ್ ಗೌಡ ವಿರುದ್ಧ ಅತ್ಯಾಚಾರ, ಅಪಹರಣ ಹಾಗೂ ವಂಚನೆ ಆರೋಪದಡಿ ಆರ್ಟಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಐಪಿಸಿ ಸೆಕ್ಷನ್ 420 ಮತ್ತು 376ರ ಅಡಿಯಲ್ಲಿ ಕಾರ್ತಿಕ್ ವಿರುದ್ಧ ಕೇಸ್ ದಾಖಲಾಗಿದೆ.
ಬುಧವಾರ ಸಂಜೆ ಸಹೋದರಿ ಸುಪ್ರಿಯಾ ಹಾಗೂ ವಕೀಲರೊಂದಿಗೆ ಠಾಣೆಗೆ ಆಗಮಿಸಿದ ಮೈತ್ರಿಯಾ, ಒಂದು ವರ್ಷಕ್ಕೂ ಹೆಚ್ಚು ದಿನಗಳಿಂದ ಪರಿಚಯವಿದ್ದ ಕಾರ್ತಿಕ್, ಮದುವೆಯಾಗುವುದಾಗಿ ದೈಹಿಕ ಸಂಬಂಧ ಬೆಳೆಸಿದ್ದ, ಮಂಗಳೂರಿನಲ್ಲಿರುವ ಸದಾನಂದಗೌಡರ ಮನೆಯಲ್ಲಿ ಜೂ.5 ಮದುವೆಯಾಗಿದ್ದ ಎಂದು ದೂರಿನಲ್ಲಿ ಮೈತ್ರಿಯಾ ವಿವರಿಸಿದ್ದಾರೆ.
ಇಂದು ಅಂಬೇಡ್ಕರ್ ಕಾಲೇಜಿನಲ್ಲಿ ಮೈತ್ರಿಯಾ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣ ಸಂಬಂಧಿಸಿದಂತೆ ಪ್ರತಿಕ್ರಯಿಸಿರುವ ಡಿ.ವಿ ಸದಾನಂದಗೌಡರು, ನನ್ನ ಕುಟುಂಬದ ವಿರುದ್ಧ ಷಡ್ಯಂತರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ನನ್ನ ಮಗ ಕಾರ್ತಿಕ್ ವಿರುದ್ಧ ವಿನಾಕಾರಣಾ ಆರೋಪ ಮಾಡಲಾಗಿದೆ. ಕೇಸ್ನಲ್ಲಿ ನನ್ನ ಮಗನ ತಪ್ಪಿದ್ದರೇ ಕಾನೂನು ಕ್ರಮ ಕೈಗೊಳ್ಳಲಿ ಎಂದು ಅವರು ತಿಳಿಸಿದ್ದಾರೆ.
ಅಲ್ಲದೇ, ಕಾರ್ತಿಕ್ಗೌಡ ವಂಚನೆ ಪ್ರಕರಣ ಕುರಿತು ವರದಿ ನೀಡುವಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸದಾನಂದಗೌಡ ಅವರಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


