ಕೆಪಿಎಸ್‌ಸಿ: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ಸೂಚನೆ

ಬೆಂಗಳೂರು: ಕೆಪಿಎಸ್‌ಸಿ 2011ರ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ(ಕೆಎಟಿ) ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ.
ಸರ್ಕಾರ ಕೆಪಿಎಸ್‌ಸಿ ನೇಮಕ ಪಟ್ಟಿ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ನೊಂದ ಅಭ್ಯರ್ಥಿಗಳಾದ ದೇವರಾಜ್ ಹಾಗೂ ಮತ್ತಿತರರು ಕೆಎಟಿ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾ.ಮೂಸ ನಾಯರ್ ಮೂಲೆ ಅವರ ಪೀಠ, ಪ್ರಕರಣ ಇತ್ಯರ್ಥ ಆಗುವವರೆಗೂ 2011ರಲ್ಲಿ ನೇಮಕವಾಗಿದ್ದ 362 ಅಭ್ಯರ್ಥಿಗಳ ಹಿತಕ್ಕೆ ಧಕ್ಕೆಯಾಗುವಂತಹ ಆದೇಶವನ್ನು ಸರ್ಕಾರ ಹೊರಡಿಸಬಾರದು, ಹಾಗೆಯೇ ಹೊಸದಾಗಿ ನೇಮಕಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತಿಲ್ಲ ಎಂದು ನಿರ್ದೇಶಿಸಿದೆ.
ಹಿನ್ನೆಲೆ: ಕೆಪಿಎಸ್‌ಸಿ 2011ರಲ್ಲಿ 362ಗೆಜೆಟೆಡ್ ಪ್ರೊಬೆಷನರಿ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿತ್ತು. ಪರೀಕ್ಷೆ ನಂತರ ನಡೆದ ಸಂದರ್ಶನದಲ್ಲಿ ಅಕ್ರಮ ನಡೆದಿರುವುದಾಗಿ ಆರೋಪ ಕೇಳಿಬಂದಿತ್ತು. ಈ ಸಂಬಂಧ ಡಾ.ಮೈತ್ರಿ ಎಂಬುವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ದೂರಿನ ಆಧಾರದ ಮೇರೆಗೆ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ನೇಮಕ ಸಂಬಂಧ ಅಕ್ರಮ ನಡೆದಿರುವುದಾಗಿ ಸಿಐಡಿ ವರದಿ ಸಲ್ಲಿಸಿತ್ತು. ಸಾಕಷ್ಟು ಅವ್ಯವಹಾರ ನಡೆದಿರುವುದು ಸಾಬೀತಾಗಿದ್ದರಿಂದ 362 ಅಭ್ಯರ್ಥಿಗಳ ನೇಮಕವನ್ನು ರಾಜ್ಯ ಸರ್ಕಾರ ರದ್ದು ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


