ಜಯಾ ಆಸ್ತಿ ಪ್ರಕರಣ: ಸೆ.20ಕ್ಕೆ ತೀರ್ಪು

ಕ.ಪ್ರ.ವಾರ್ತೆ, ಬೆಂಗಳೂರು, ಆ.28
ಅಕ್ರಮವಾಗಿ ರು. 66.65 ಕೋಟಿ ಆಸ್ತಿ ಸಂಪಾದಿಸಿದ ಆರೋಪ ಎದುರಿಸುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರ ವಿಚಾರಣೆ ಪೂರ್ಣಗೊಂಡಿದ್ದು ಬೆಂಗಳೂರಿನ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 20 ರಂದು ಅಂತಿಮ ತೀರ್ಪು ನೀಡಲಿದೆ.
ಅಕ್ರಮ ಆಸ್ತಿ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಮೈಕಲ್ ಜಾನ್ ಕುನ್ಹ ಅವರ ಪೀಠ ಅಂತಿಮ ತೀರ್ಪುನ್ನು ಸೆ.20ಕ್ಕೆ ನೀಡಲಿದ್ದು, ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಹಾಗೂ ಇತರೆ ಮೂವರು ಆರೋಪಿಗಳಾದ ಸುಧಾಕರನ್, ಶಶಿಕಲಾ ಹಾಗೂ ಇಲವರಸಿ ಖುದ್ದು ಹಾಜರಿರಬೇಕು ಎಂದು ಸೂಚಿಸಿದೆ.
ಮೊದಲ ಬಾರಿ 1991-95ರವರೆಗೆ ಮುಖ್ಯಮಂತ್ರಿ ಆಗಿದ್ದ ವೇಳೆ ಜಯಲಲಿತಾ ಅಕ್ರಮ ಆಸ್ತಿ ಸಂಪಾದಿಸಿದ್ದಾರೆಂಬ ಆರೋಪ ಹೊತ್ತಿದ್ದರು. ಜಯಲಲಿತಾ ನಿವಾಸದ ಮೇಲೆ ಸಿಐಡಿ ದಾಳಿ ನಡೆಸಿತ್ತು. ದಾಳಿ ವೇಳೆ 800 ಕೆಜಿ ಬೆಳ್ಳಿ, 28 ಕೆಜಿ ಚಿನ್ನ, 750 ಜತೆ ಪಾದರಕ್ಷೆ, 10,500 ಸೀರೆ, 91 ಕೈಗಡಿಯಾರ ಹಾಗೂ ಇತರೆ ಅಮೂಲ್ಯವಸ್ತು ಜಪ್ತಿ ಮಾಡಿ ಚೆನ್ನೈ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು.
ನಂತರ ಮತ್ತೊಮ್ಮೆ ಜಯಲಲಿತಾ ಮುಖ್ಯಮಂತ್ರಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಅಡ್ಡಿ ಉಂಟಾಗುವುದಾಗಿ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ಪರಿಗಣಿಸಿದ ಸುಪ್ರೀಂ 2003ರಲ್ಲಿ ಕೇಸ್‌ನ್ನು ಚೆನ್ನೈನಿಂದ ಬೆಂಗಳೂರಿಗೆ ವರ್ಗಾಯಿಸಿ ಆದೇಶಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


