ಜಿಲ್ಲಾ ಸುದ್ದಿ

ಪಾರ್ಕ್ ಉದ್ಘಾಟನೆಗೆ ಜನಪ್ರತಿನಿಧಿಗಳ ವಾಗ್ವಾದ: 144 ಸೆಕ್ಷನ್ ಜಾರಿ

ಪಾರ್ಕ್ ಉದ್ಘಾಟನೆಗೆ ಜನಪ್ರತಿನಿಧಿಗಳ ವಾಗ್ವಾದ: 144 ಸೆಕ್ಷನ್ ಜಾರಿ
Published On :

ಬೆಂಗಳೂರು: ನೂತನವಾಗಿ ನಿರ್ಮಿತವಾದ ಉದ್ಯಾನವನ ಉದ್ಘಾಟನೆ ಸಂಬಂಧ ನಗರದ ಜನಪ್ರತಿನಿಧಿಗಳು ವಾಗ್ವಾದ ನಡೆಸಿದ್ದಾರೆ.

ಬೆಂಗಳೂರಿನ ನಾಗರಬಾವಿಯಲ್ಲಿರುವ ಚಂದ್ರಗಿರಿ ಪಾರ್ಕ್ ಉದ್ಘಾಟನೆ ಸಮಾರಂಭವನ್ನು ಭಾನುವಾರ ಏರ್ಪಡಿಸಲಾಗಿತ್ತು. ಆದರೆ ಕಾರ್ಯಕ್ರಮ ಸಂಬಂಧ ಶಾಸಕ ಪ್ರಿಯಾಕೃಷ್ಣಾ ಮತ್ತು ಕಾರ್ಪೋರೇಟರ್ ಉಮೇಶ್ ಶೆಟ್ಟಿ ನಡುವೆ ವಾಗ್ವಾದ ಉಂಟಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿದ ಹಿನ್ನಲೆಯಲ್ಲಿ ಇಂದು ನಡೆಯಬೇಕಿದ್ದ ಉದ್ಘಾಟನಾ ಸಮಾರಂಭವನ್ನು ಮುಂದೂಡಲಾಗಿದ್ದು, ಪಾರ್ಕ್ ಸುತ್ತಾಮುತ್ತಾ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಪಾರ್ಕ್ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇಂದು ಇಡೀ ದಿನ ಉದ್ಯಾನವನ ಸುತ್ತಮುತ್ತ144 ಸೆಕ್ಷನ್ ಜಾರಿಯಲ್ಲಿರುತ್ತದೆ. ಭದ್ರತೆಗಾಗಿ 300ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ. ಬಿಬಿಎಂಪಿಯಿಂದ ಪಾರ್ಕ್ ಉದ್ಘಾಟನೆ ಮಾಡುತ್ತಿರಲಿಲ್ಲ. ಕಾರ್ಯಕ್ರಮದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಯಾರೂ ನನಗೆ ಉದ್ಘಾಟನೆಯ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಶಾಸಕ ಪ್ರಿಯಾಕೃಷ್ಣಾ ಆರೋಪಿಸಿದ್ದಾರೆ.

ನಾನು ಯಾವ ಕಾರ್ಯಕ್ರಮಗಳಿಗೂ ತೊಂದರೆ ಮಾಡಿಲ್ಲ. ಕಾರ್ಪೋರೇಟರ್ ಉಮೇಶ್ ಶೆಟ್ಟಿ ಆರೋಪ ಶುದ್ಧ ಸುಳ್ಳು. ಆರೋಪ ಮಾಡಲು ಉಮೇಶ್ ಶೆಟ್ಟಿಗೆ ಸ್ವಾತಂತ್ರ್ಯವಿದೆ ಎಂದು ಅವರು ತಿಳಿಸಿದ್ದಾರೆ.

ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿರುವ ಮಾಜಿ ಸಚಿವ ವಿ.ಸೋಮಣ್ಣ, ಸೆಪ್ಟೆಂಬರ್ 4ರಂದು ಪಾರ್ಕ್ ಉದ್ಘಾಟನೆ ಮಾಡುತ್ತೇವೆ. ಮತ್ತೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಶಾಸಕರು ಸೇರಿದಂತೆ ಎಲ್ಲರಿಗೂ ಆಹ್ವಾನ ನೀಡುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.