ಜಿಲ್ಲಾ ಸುದ್ದಿ

ಕಾರ್ತಿಕ್-ಮೈತ್ರಿಯಾ ವಿವಾ(ದ)ಹ: ಡಿವಿಎಸ್ ಪುತ್ರನಿಗೆ ಬಂಧನ ಭೀತಿ

ಕಾರ್ತಿಕ್-ಮೈತ್ರಿಯಾ ವಿವಾ(ದ)ಹ: ಡಿವಿಎಸ್ ಪುತ್ರನಿಗೆ ಬಂಧನ ಭೀತಿ
Published On :

ಬೆಂಗಳೂರು: ನಟಿ ಮೈತ್ರಿಯಾ ಗೌಡ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಸಚಿವ ಡಿವಿ ಸದಾನಂದಗೌಡ ಅವರ ಪುತ್ರ ಕಾರ್ತಿಕ್‌ಗೌಡ ಅವರಿಗೆ ಬಂಧನ ಭೀತಿ ಎದುರಾಗಿದೆ.

ನಟಿ ಮೈತ್ರಿ ಮತ್ತು ಕಾರ್ತಿಕ್ ಅವರ ವಿವಾಹ ವಿವಾದ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಆರ್.ಟಿ.ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್ ಗೌಡ ಅವರಿಗೆ ಗಡುವು ನೀಡಿದ್ದಾರೆ. ಕಾರ್ತಿಕ್ ಗೌಡ ಅವರ ವಿರುದ್ಧ ಅಪಹರಣ, ಅತ್ಯಾಚಾರ ಮತ್ತು ವಂಚನೆ ಆರೋಪದಡಿ ದೂರು ದಾಖಲಿಸಿಕೊಳ್ಳಲಾಗಿತ್ತು. ಇದೀಗ ಬುಧವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೆ ಪೊಲೀಸರು ಸೂಚನೆ ನೀಡಿದ್ದು, ಹಾಜರಾಗದಿದ್ದರೆ ಗುರುವಾರ ಅವರನ್ನು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಗೌಡ ಅವರಿಗೆ ಕಳೆದ ಶುಕ್ರವಾರವೇ ಆರ್‌ಟಿ ನಗರ ಪೊಲೀಸರು ಕಾರ್ತಿಕ್ ಗೌಡ ಅವರಿಗೆ ನೋಟಿಸ್ ನೀಡಿದ್ದು, ಈ ವರೆಗೂ ಕಾರ್ತಿಕ್ ಅವರು ವಿಚಾರಣೆಗೆ ಹಾಜರಾಗಲಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್ ಗೌಡ ಅವರಿಗೆ ಪೊಲೀಸರು ಗಡುವು ನೀಡಿದ್ದಾರೆ. ಇದಕ್ಕೂ ಮೊದಲು ನಟಿ ಮೈತ್ರಿಯಾ ಗೌಡ ಅವರನ್ನು ವಿಚಾರಣೆಗೊಳಪಡಿಸಿದ್ದ ಪೊಲೀಸರು ಆಕೆಯ ಹೇಳಿಕೆಯಿಂದ ಕೊಂಚ ಗೊಂದಲಕ್ಕೆ ಒಳಗಾಗಿದ್ದರು. ಗೊಂದಲಮಯ ಹೇಳಿಕೆ ನೀಡುತ್ತಿದ್ದ ಮೈತ್ರಿಯಾ ಅವರನ್ನು ಎರಡೆರಡು ಬಾರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೇಳಿಕೆಯನ್ನು ದಾಖಲು ಮಾಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.