ಸಂಭಾಜಿ ಪಾಟೀಲ್ ವಿರುದ್ಧ ಚಾರ್ಜ್‌ಶೀಟ್

ಸಂಭಾಜಿ ಪಾಟೀಲ್
ಸಂಭಾಜಿ ಪಾಟೀಲ್
Updated on: 

ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಮೇಲೆ ಚಾರ್ಜ್‍ಶೀಟ್ ದಾಖಲಾಗಿದೆ.

ಕಳೆದ ಬಾರಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಮಹಾಮೇಳ ನಡೆಸಿದ್ದ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ತಮಗೆ ವಿಧಿಸಿದ ಶರತ್ತುಗಳನ್ನು ಉಲ್ಲಂಘಿಸಿ ಭಾಷಣ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದರು.

ಅಲ್ಲದೇ ಮಹಾರಾಷ್ಟ್ರದ ರಾಜಕಾರಣಿಗಳನ್ನು ಕರೆತಂದು ಭಾಷಣ ಮಾಡಿಸಿ ಬೆಳಗಾವಿ ಜನರ ಭಾವನೆಗಳನ್ನು ಕೆರಳಿಸಿದ್ದಾರೆ ಎಂದು ಬೆಳಗಾವಿ ಜಿಲ್ಲಾಡಳಿತ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಇದನ್ನು ಪರಿಶೀಲನೆ ಮಾಡಿದ ಸರ್ಕಾರ ಸಂಭಾಜಿ ಪಾಟೀಲ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಿತ್ತು.

ಮಹಾರಾಷ್ಟ್ರದ ಮಾಜಿ ಗ್ರಹ ಸಚಿವ ಆರ್ ಆರ್ ಪಾಟೀಲ ವಿರುದ್ಧವೂ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ ಎಂದು ಬೆಳಗಾವಿ ವಲಯದ ಐಜಿಪಿ ಭಾಸ್ಕರ್ ರಾವ್ ತಿಳಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com