ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು...
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಬಳ್ಳಾರಿ: ಹೊಸಪೇಟೆಯಲ್ಲಿಂದು ಮತ್ತೊಂದು ಗ್ಯಾಂಗ್ ರೇಪ್ ಘಟನೆ ನಡೆದಿದೆ. 8 ವರ್ಷದ ಅಪ್ರಾಪ್ತೆ ಬಾಲಕಿಯ ಮೇಲೆ, 4 ಅಪ್ರಾಪ್ತ ಬಾಲಕರಿಂದ ಅಮಾನವೀಯ ಕೃತ್ಯ ನಡೆದಿದೆ.

ದಿನದಿಂದ ದಿನಕ್ಕೆ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಘಟನೆಗಳು ಹೆಚ್ಚುತ್ತಲೇ ಸಾಗಿದ್ದು, ನಾಗರೀಕ ಸಮಾಜ ತಲೆ ತಗ್ಗಿಸುವಂತ ಪರಿಸ್ಥಿತಿ ಎದುರಾಗಿದೆ.

ಗಣಿಜಿಲ್ಲೆ ಬಳ್ಳಾರಿಯಲ್ಲಿ ಇಂದು 8 ವರ್ಷದ ಅಪ್ರಾಪ್ತೆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. 4 ಮಂದಿ ಅಪ್ರಾಪ್ತ ಬಾಲಕರಿಂದ ಹೀನ ಕೃತ್ಯ ನಡೆದಿದೆ.

ಘಟನೆಯಿಂದ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಅಸ್ವಸ್ಥ ಬಾಲಕಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ಕು ಬಾಲಕರು 14 ವರ್ಷದೊಳಗಿನವರಾಗಿದ್ದು, ಅವರನ್ನು ಪೊಲೀಸರು ಬಾಲಮಂದಿರಕ್ಕೆ ಸ್ಥಳಾಂತರಿಸಿದ್ದಾರೆ. ಘಟನೆಯ ಕುರಿತು ಹೊಸಪೇಟೆ ನಗರ ಪೊಲೀಸ್
ಠಾಣೆಯಲ್ಲಿ ಪ್ರಖರಣ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com