

ಬೆಂಗಳೂರು: ಗಾಯಕಿ ಪ್ರೇಮಲತಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದತಿ ಕೋರಿ ರಾಘವೇಶ್ವರ ಶ್ರೀ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ 6ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಪ್ರತಿಕ್ರಿಯಿಸಿರುವ ಶ್ರೀಗಳ ಪರ ವಕೀಲರು, ಸರ್ಕಾರ ಹಾಗೂ ಸಿಐಡಿ ಇಲಾಖೆಯ ಮೇಲೆ ತಮಗೆ ನಂಬಿಕೆ ಇಲ್ಲವಾಗಿದೆ. ಆದ್ದರಿಂದ ಪ್ರಕರಣವನ್ನು ತಾವೇ ಮುಂದುವರಿಸುವಂತೆ ಮನವಿ ಮಾಡಿದರು. ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಆರೋಪ ಪಟ್ಟಿಯನ್ನು ಸಲ್ಲಿಸಿದ ಬಳಿಕ ಕೆಲ ನ್ಯಾಯಾಲಯದಲ್ಲಿ ಪ್ರಶ್ನಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಿ ಎಂದು ವಕೀಲರಿಗೆ ಸೂಚಿಸಿ ಬಳಿಕ ವಿಚಾರಣೆಯನ್ನು ಜ. 6ಕ್ಕೆ ಮುಂದೂಡಿತು.
ರಾಘವೇಶ್ವರ ಶ್ರೀ ವಿರುದ್ಧದ ಅತ್ಯಾಚಾರ ಪ್ರಕರಣ ಮೇಲ್ನೊಟಕ್ಕೆ ಸಾಭೀತಾಗಿದೆ ಎಂದು ಶುಕ್ರವಾರ ಅಡ್ವೋಕೇಟ್ ಜನರಲ್ ರವಿವರ್ಮ ಕುಮಾರ್ ನ್ಯಾಯಾಧೀಶರ ಮುಂದೆ ಹೇಳಿದ್ದರು. ವೈದ್ಯಕೀಯ ಪರೀಕ್ಷೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡಿದ್ದರು. ಇಂದಿನ ವಿಚಾರಣೆಗೆ ಪ್ರೇಮಲತಾ ದಂಪತಿ ಕೋರ್ಟ್‌ಗೆ ಹಾಜರಾಗಿದ್ದರು.