ದುಪ್ಪಟ್ಟು ಬೋಧನಾ ಶುಲ್ಕ: ಸರ್ಕಾರಕ್ಕೆ ಹೈ ನೋಟಿಸ್

ಖಾಸಗಿ ಅನುದಾನಿತ ಕಾಲೇಜುಗಳ ಆಡಳಿತ...
ಹೈಕೋರ್ಟ್
ಹೈಕೋರ್ಟ್
Updated on

ಬೆಂಗಳೂರು: ಖಾಸಗಿ ಅನುದಾನಿತ ಕಾಲೇಜುಗಳ ಆಡಳಿತ ಮಂಡಳಿಗಳು ವಸೂಲು ಮಾಡುವ ದುಪ್ಪಟ್ಟು ಬೋಧನಾ ಮತ್ತು ಪ್ರಯೋಗಾಲಯದ ಶುಲ್ಕದ ಒಂದಂಶವನ್ನು ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಜಂಟಿ ಖಾತೆಗೆ ಜಮಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಖಾಸಗಿ ಅನುದಾನಿತ ಕಾಲೇಜುಗಳ ಆಡಳಿತ ಮಂಡಳಿಗಳು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಸ್ ಬೋಪಣ್ಣ ಅವರಿದ್ದ ಏಕ ಸದಸ್ಯ ಪೀಠ, ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.

ಅರ್ಜಿದಾರರ ಪರ ವಕೀಲ ಎನ್.ರವೀಂದ್ರನಾಥ್ ಕಾಮತ್ ವಾದ ಮಂಡಿಸಿ, ಸರ್ಕಾರ ಮತ್ತು ಕಾಲೇಜುಗಳ ನಡುವೆ 1987ರಲ್ಲಿ ಒಪ್ಪಂದವೊಂದು ಏರ್ಪಟ್ಟಿತ್ತು. ಒಪ್ಪಂದದ ಪ್ರಕಾರ ಕಾಲೇಜುಗಳು ವಿದ್ಯಾರ್ಥಿಗಳಿಂದ ಪಡೆದ ಶುಲ್ಕದಲ್ಲಿ ಒಂದಂಶವನ್ನು ಸರ್ಕಾರಕ್ಕೆ ಪಾವತಿಸುವಂತಿಲ್ಲ.

ಆದರೆ, ಸರ್ಕಾರ ಆ ಒಪ್ಪಂದ ಉಲ್ಲಂಘಿಸಿ ಆದೇಶ ಹೊರಡಿಸಿದೆ. ಇದು ಕಾನೂನು ಬಾಹಿರ ಎಂದು ಆರೋಪಿಸಿ, ಸರ್ಕಾರದ ಆದೇಶ ರದ್ದುಪಡಿಸುವಂತೆ ನ್ಯಾಯಪೀಠವನ್ನು ಕೋರಿದರು.

ಖಾಸಗಿ ಅನುದಾನಿತ ಕಾಲೇಜುಗಳ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಂದ ವಸೂಲಿ ಮಾಡಿದ ದುಪ್ಪಟ್ಟು ಬೋಧನಾ ಮತ್ತು ಪ್ರಯೋಗಾಲಯದ ಶುಲ್ಕದಲ್ಲಿ ಒಂದಂಶವನ್ನು ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ನಿರ್ವಹಿಸುತ್ತಿರುವ ಜಂಟಿ ಖಾತೆಗೆ ಜಮಾ ಮಾಡಬೇಕು ಎಂದು ಶಿಕ್ಷಣ ಇಲಾಖೆಯ(ಕಾಲೇಜು ಶಿಕ್ಷಣ) ಅಧೀನ ಕಾರ್ಯದರ್ಶಿ 2014ರ ಸೆ.18ರಂದು ಆದೇಶ ಹೊರಡಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com