ಜಿಲ್ಲಾ ಸುದ್ದಿ

ರೈತನ ಸಾವಿಗೆ ರೊಚ್ಚಿಗೆದ್ದ ಜನ ಅಶ್ರುವಾಯು ಪ್ರಯೋಗ

ರೈತನ ಸಾವಿಗೆ ರೊಚ್ಚಿಗೆದ್ದ ಜನ ಅಶ್ರುವಾಯು ಪ್ರಯೋಗ
ಆತ್ಮಹತ್ಯೆ ಮಾಡಿಕೊಂಡ ರೈತ ಶಿವಕುಮಾರ್
Published On :

ಇಬ್ಬರು ಸಿಪಿಐಗಳಿಗೆ ಗಾಯ
ಪೊಲೀಸ್ ವಾಹನಕ್ಕೆ ಬೆಂಕಿ
ತುಮಕೂರು:
ಅಜ್ಜಗೊಂಡನಹಳ್ಳಿ ಕಸ ವಿಲೇವಾರಿ ಘಟಕ ಸ್ಥಾಪನೆ ವಿರುದ್ಧ ನಡೆಯುತ್ತಿದ್ದ ಹೋರಾಟ ಹೊಸ ತಿರುವು ಪಡೆದುಕೊಂಡಿದೆ.

ಕಸವಿಲೇವಾರಿ ಕೇಂದ್ರದ ಪಕ್ಕದಲ್ಲಿಯೇ ಜಮೀನು ಹೊಂದಿದ್ದ ರೈತ ಜಿ.ಶಿವಕುಮಾರ್(40) ಶುಕ್ರವಾರ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಯಿಂದ ಶನಿವಾರ ಹಿಂಸಾರೂಪಕ್ಕೆ ತಿರುಗಿದ್ದು, ಪರಿಸ್ಥಿತಿ ನಿಭಾಯಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.

ತನ್ನ ಜಮೀನಿಗೆ ಬೆಲೆ ಇಲ್ಲ ಎಂಬ ಕೊರಗಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಶಿವಕುಮಾರ್ ಅವರ ಶವವನ್ನು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ತರಲಾಯಿತು. ಆಗ ಕುಪಿತಗೊಂಡ ಗ್ರಾಮಸ್ಥರಿಂದ ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೊನೆಗೆ ಪೊಲೀಸ್ ವಾಹನಕ್ಕೂ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದು, ಈ ವೇಳೆ ಕೆಲವರಿಗೆ ಗಾಯಗಳಾಗಿವೆ. ಶಂಕರ್ ಎಂಬಾತನಿಗೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಪುನಃ ಪೊಲೀಸರ ಮೇಲೆ ಪ್ರತಿ ದಾಳಿ ನಡೆಸಿದ್ದರಿಂದ ಸಿಪಿಐಗಳಾದ ಖಾದರ್ ಹಾಗೂ ರವಿ ಅವರಿಗೆ ಗಾಯಗಳಾಗಿವೆ. ಅವರನ್ನು ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.

ಆಕ್ರೋಷ: ಕಸ ವಿಲೇವಾರಿ ಘಟಕವನ್ನು ತಮ್ಮ ಜಮೀನು ಪಕ್ಕದಲ್ಲಿ ಸ್ಥಾಪನೆ ಮಾಡುತ್ತಿದ್ದರಿಂದ ಅಸಮಾಧಾನಗೊಂಡಿದ್ದ ಶಿವಕುಮಾರ್ ವಿರೋಧ ವ್ಯಕ್ತಪಡಿಸುತ್ತಲೇ ಇದ್ದರು. ಇದಲ್ಲದೆ ಸೂಕ್ತ ಪರಿಹಾರ ಮತ್ತು ಉದ್ಯೋಗ ನೀಡುವುದಾಗಿ ಸರ್ಕಾರವೂ ಹೇಳಿದ್ದರೂ ಭರವಸೆಗಳು ಈಡೇರಲಿಲ್ಲವೆಂದು ಆಕ್ರೋಶಗೊಂಡ ಪ್ರತಿಭಟನಾಕಾರರು ಪ್ರತಿಭಟನೆಗಿಳಿದಿದ್ದಾರೆ.

ಪ್ರತಿಭಟನೆ: ಆಂಬ್ಯುಲೆನ್ಸ್ ಮೂಲಕ ಗ್ರಾಮಕ್ಕೆ ಶವವನ್ನು ತಂದಾಗಿ ಪೊಲೀಸರೂ ತಮ್ಮ ವಾಹನದಲ್ಲಿ ಹಿಂಬಾಲಿಸಿದ್ದಾರೆ. ಶವ ಗ್ರಾಮಕ್ಕೆ ಬಂದ ಕೂಡಲೇ ಪೊಲೀಸರ ಮೇಲೆ ಮುಗಿಬಿದ್ದ ನಾಗರಿಕರು ಕಲ್ಲು ತೂರಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಗಾಳಿಯಲ್ಲಿ ಗುಂಡುಹಾರಿಸಿ ಚದುರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.