ಮೋದಿ ಅಲೆ ಇದ್ದಿದ್ದರೆ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಬೇಕಿತ್ತು

ಬಿಜೆಪಿ ಸಾಧ್ಯವಾದ ಕಡೆಗಳೆಲ್ಲಾ ಕಿತಾಪತಿ ಹುಡುಕಿ ಮೂಗು ತೂರಿಸುವುದು ಅದರ ಚಾಳಿ...
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾಗಿದ್ದು, ಈ ಸೋಲು ಖಚಿತವಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಮ್ಮು ಕಾಶ್ಮೀರದಲ್ಲಾಗಿರುವ ಕಾಂಗ್ರೆಸ್ ಸೋಲು ಖಚಿತವಲ್ಲ. ಕಾಂಗ್ರೆಸ್ ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಚೆಂಡಿನಂತೆ ಪುಟಿದೇಳಲಿದೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಾಖಂಡ್‌ನಲ್ಲಿ ನಮ್ಮ ಸರ್ಕಾರ ಇಲ್ಲದಿದ್ದರೂ, ಇಷ್ಟರ ಮಟ್ಟಿಗೆ ಸ್ಥಾನಗಳಿಸಿದೆ. ಅಂತೆಯೇ ಜಮ್ಮು ಕಾಶ್ಮೀರದಲ್ಲಿ ನಮಗೆ ಒಂದು ಸ್ಥಾನ ಮಾತ್ರ ಕಡಿಮೆಯಾಗಿದೆ ಇತರೆ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡಿದ್ದೇವೆ. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದೇ ಬಿಡುತ್ತೇವೆಂದು ಎಂದು ಬೀಗುತ್ತಿದ್ದ ಬಿಜೆಪಿಗೆ ನಿರಾಶೆ ಮೂಡಿದೆ.

ಜಾರ್ಕಂಡ್‌ನಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದ ಅವರು, ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಸ್ವಲ್ಪ ದಿನ ಮಾತ್ರ ಉತ್ಸಾಹ ಎದ್ದುಕಾಣುತ್ತದೆ. ಆದರೆ ಅದು ಮೋದಿ ಅಲೆ ಎಂದು ವರ್ಣಿಸಲು ಸಾಧ್ಯವಿಲ್ಲ.  ಮೋದಿ ಅಲೆ ಇದ್ದಿದ್ದೆ ಆದರೆ ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಪ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಬೇಕಿತ್ತು. ಆದರೆ ಅದು ಹಾಗಾಗಿಲ್ಲ ಎಂದು ಅವರು ತಿಳಿಸಿದರು.

ಇನ್ನೂ ಮಠಗಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಸಿಎಂ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಆದರೆ, ಇದರಿಂದ ಮಠಗಳ ಆಡಳಿತದಲ್ಲಿ ರಾಜ್ಯ ಸರ್ಕಾರ ಮೂಗು ತೂರಿಸಲಿದೆ ಎಂಬ ಆತಂಕ ಬೇಡ ಎಂದು ಭರವಸೆ ನೀಡಿದರು.

ತಿದ್ದುಪಡಿ ಮಸೂದೆಯ ಬಗ್ಗೆ ಸಾರ್ವಜನಿಕವಾಗಿ ಚರ್ಚೆಯಾಗಬೇಕು. ಎಲ್ಲಾ ಮಠಾಧೀಶರಲ್ಲಿ ಮನವಿ ಮಾಡುತ್ತೇನೆ. ಅನಗತ್ಯವಾಗಿ ಗೊಂದಲ ಮತ್ತು ಆತಂಕ ಬೇಡ ಎಂದು ತಿಳಿಸಿದ ಸಿಎಂ,ಬಿಜೆಪಿ ಸಾಧ್ಯವಾದ ಕಡೆಗಳೆಲ್ಲಾ ಕಿತಾಪತಿ ಹುಡುಕಿ ಮೂಗು ತೂರಿಸುವುದು ಅದರ ಚಾಳಿ ಎಂದು ತರಾಟೆಗೆ ತೆಗೆದುಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com