
ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ಪತ್ನಿ ಶ್ರೀದೇವಿ ಪೂಜಾರಿ ಮತ್ತು ಮಗನನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಮುಂಬೈ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದಿಳಿದಾಗ ಅವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣ ಮಂಗಳೂರು ಪೊಲೀಸರು. 2012ರಲ್ಲಿ ಕದ್ರಿ ಇನ್ಸ್‌ಪೆಕ್ಟರ್ ಆಗಿದ್ದ ಡಾ. ವೆಂಕಟೇಶ್ ಪ್ರಸನ್ನ, ಅವರು ರವಿ ಪೂಜಾರಿಯ ಪತ್ನಿ, ಮಗನ ವಿರುದ್ಧ ಲುಕ್ ಔಟ್ ಸರ್ಕ್ಯೂಲರ್(ಎಲ್‌ಒಸಿ) ಹೊರಡಿಸಿದ್ದರು. ಈ ಹಿನ್ನಲೆಯಲ್ಲಿ ಮುಂಬೈ ಪೊಲೀಸರು ಅವರಿಬ್ಬರನ್ನು ಬಂಧಿಸಿದ್ದಾರೆ.
Advertisement