ಬೆಳಗಾವಿಯ ವಿಟಿಯು ಕ್ಯಾಂಪಸ್‌ನಲ್ಲಿ ಹುಲಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಹುಲಿ ಕಾಣಿಸಿಕೊಂಡಿದೆ.

ಸೋಮವಾರ ಬೆಳಿಗ್ಗೆ ಕ್ಯಾಂಪಸ್‌ನ ಅತಿ ಹೆಚ್ಚು ಮರಗಳಿರುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ರಾತ್ರಿ ಹುಲಿಯನ್ನು ಗಮನಿಸಿ, ಬೆಳಗಿನ ಜಾವ ಅದನ್ನು ಸೆರೆ ಹಿಡಿಯಲಾಗುವುದು ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಅದಕ್ಕಾಗಿ ವಿಟಿಯು ಕ್ಯಾಂಪಸ್‌ನಲ್ಲಿ ಇದೀಗ ಅರಣ್ಯ ಇಲಾಖೆಯ ಸಿಬ್ಬಂದಿ, ಅರವಳಿಕೆ ತಜ್ಞರು, ಪೊಲೀಸ್ ಪಡೆ ನಿಯೋಜಿಸಲಾಗಿದೆ. ದಷ್ಟಪುಷ್ಟವಾಗಿರುವ ಈ ಹುಲಿ ಸಮೀಪದ ಅರಣ್ಯದಿಂದ ವಿಟಿಯು ಕ್ಯಾಂಪಸ್ಸಿಗೆ ಬಂದಿರಬಹುದು ಎಂದು ಅಂದಾಜಿಸಲಾಗಿದೆ. ಚಿಕ್ಕಮಗಳೂರಿನಿಂದ ತಂದು ಬಿಟ್ಟಿದ್ದ ಹುಲಿ ಇದಲ್ಲ. ಆ ಹುಲಿಗೂ ಈ ಹುಲಿಗೂ ಸಾಮ್ಯತೆ ಇಲ್ಲ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com