ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಪ್ರಯಾಣ ದರ ಇಳಿಕೆ: ಜ. 1ರಿಂದ ಜಾರಿಗೆ

ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೂತನ ಪ್ರಯಾಣ ದರ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ...
ಬಿಎಂಟಿಸಿ
ಬಿಎಂಟಿಸಿ

ಬೆಂಗಳೂರು: ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೂತನ ಪ್ರಯಾಣ ದರ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಗುರುವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡೀಸೆಲ್ ದರ ಕಡಿಮೆಯಾದ ಬೆನ್ನಲ್ಲೇ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಪ್ರಯಾಣ ದರವನ್ನು ಕಡಿತಗೊಳಿಸಬೇಕು ಎಂಬ ಬೇಡಿಕೆ ಹೆಚ್ಚಾಗಿತ್ತು. ಹೀಗಾಗಿ ಜನವರಿ 1 ರಿಂದ ನೂತನ ದರ ಜಾರಿಗೆ ಬರಲಿದ್ದು, ಬಸ್ ಪ್ರಯಾಣ ದರ ಇಳಿಕೆ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದರು.

ಮೂಲಗಳ ಪ್ರಕಾರ, ಶೇ. 3ರಿಂದ 4 ರಷ್ಟು ಇಳಿಕೆ ಆಗಲಿದೆ. ಪ್ರತಿ ಸ್ಟೇಜ್‌ಗೆ 1 ರು. ಇಳಿಕೆ ಆಗಲಿದೆ ಎಂದು ತಿಳಿದುಬಂದಿದೆ. ಇನ್ನು ಬಿಎಂಟಿಸಿ ದಿನದ ಬಸ್ ಪಾಸ್ ದರದಲ್ಲೂ 5 ರು. ಇಳಿಕೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com