ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿತ: ಕಾರ್ಮಿಕ ಸಾವು

ಕಾಮಗಾರಿ ನಡೆಸಿದ ಕಂಪನಿ ವಿರುದ್ಧ ಕ್ರಿಮಿನಲ್ ಮೊಕದಮ್ಮೆ...
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿತ
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿತ

ಕೊಪ್ಪಳ: ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಕೊಪ್ಪಳದಲ್ಲಿ ಸಂಭವಿಸಿದೆ.

ಕೊಪ್ಪಳ ಟೀಚರ್ಸ್ ಕಾಲೋನಿಯಲ್ಲಿ ಜಿಲ್ಲಾಡಳಿತ ವತಿಯಿಂದ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ನಿರ್ಮಾಣ ಹಂತದ ಟ್ಯಾಂಕ್ ಏಕಾಏಕಿ ಕುಸಿದು ಬಿದ್ದಿದೆ. ಕಾಮಗಾರಿಯಲ್ಲಿ ನಿರತನಾಗಿದ್ದ ಕಾರ್ಮಿಕನೊಬ್ಬ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದನು.

ಈ ಘಟನೆಯಿಂದಾಗಿ ರೊಚ್ಚಿಗೆದ್ದ ಸ್ಥಳೀಯರು ಕೊಪ್ಪಳ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವಶೇಷಗಳಡಿ ಹಲವರು ಸಿಲುಕಿಹಾಕಿರುವ ಶಂಕೆ ವ್ಯಕ್ತವಾಗಿದ್ದು, ಅವಶೇಷಗಳ ತೆರವು ಕಾರ್ಯಾಚರಣೆಗೆ ಜಿಲ್ಲಾಡಳಿತ ಮುಂದಾಯಿತು.

ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಲು, ಸ್ಥಳಕ್ಕೆ ಜೆಸಿಬಿ ಯಂತ್ರಗಳು, ಅಗ್ನಿ ಶಾಮಕ ಯಂತ್ರಗಳು ದೌಡಾಯಿಸಿ ಕಾರ್ಯಾಚರಣೆ ನಡೆಸಿದವು.

ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಸಾರ್ವಜನಿಕರು ಆಗ್ರಹಿಸಿದರು. ಘಟನಾಸ್ಥಳಕ್ಕೆ ಆಗಮಿಸಿದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಮೃತ ಕಾರ್ಮಿಕನ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕಾಮಗಾರಿ ನಡೆಸಿದ ಕಂಪನಿ ವಿರುದ್ಧ ಕ್ರಿಮಿನಲ್ ಮೊಕದಮ್ಮೆಗೆ ಸಚಿವರು ಆದೇಶ ಹೊರಡಿಸಿದ್ದಾರೆ. ಹೈದ್ರಬಾದ್ ಮೂಲದ ಮೆಗಾ  ಕನ್ಟ್ರಕ್ಷನ್ಸ್‌ಗೆ ಗುತ್ತಿಗೆ ನೀಡಲಾಗಿತ್ತು.

ಘಟನೆಯ ಬಳಿಕ ಕಾಮಗಾರಿ ಅಧಿಕಾರಿಗಳು ಪರಾರಿಯಾಗಿದ್ದು, ಪೊಲೀಸರು ಶೋಧಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com