ಜಿಲ್ಲಾ ಸುದ್ದಿ

ತೀರ್ಥಹಳ್ಳಿ ಬಾಲಕಿ ಸಾವು ಪ್ರಕರಣ: ದಿನದಿನಕ್ಕೂ ಜಟಿಲ

ತೀರ್ಥಹಳ್ಳಿ ಬಾಲಕಿ ಸಾವು ಪ್ರಕರಣ: ದಿನದಿನಕ್ಕೂ ಜಟಿಲ
Published On :

ಶಿವಮೊಗ್ಗ: ತೀರ್ಥಹಳ್ಳಿಯ ೮ ನೇ ತರಗತಿಯ ವಿದ್ಯಾರ್ಥಿನಿ ನಂದಿತಾ ಸಾವಿನ ಪ್ರಕರಣದಲ್ಲಿ, ಡೆತ್ ನೋಟ್ ಸಿಕ್ಕಿದೆ ಎಂದು ಪೊಲೀಸರು ತಿಳಿಸಿ ಮೇಲುನೋಟಕ್ಕೆ ರೇಪ್ ಅಥವಾ ಕೊಲೆ ಯತ್ನ ನಡೆದಿಲ್ಲ ಎಂದು ನಂಬಿಸಲು ಪ್ರಯತ್ನಿಸಿದ ಹಿನ್ನಲೆಯಲ್ಲಿ, ವಿರೋಧ ಪಕ್ಷದ ನಾಯಕರು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿ ಪಕ್ಷದ ಪ್ರಹ್ಲಾದ್ ಜೋಶಿ ಅವರು, ಸರ್ಕಾರ ಅನಾವಶ್ಯಕವಾಗಿ ಹಿಂದೂ ನಾಯಕರನ್ನು ಬಂಧಿಸಿ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳೆಯುತ್ತಿದೆ ಎಂದು ಆರೋಪಿಸಿರುವ ಅವರು ಇಡೀ ಪ್ರಕರಣವನ್ನು ತಿರುಚುವ ಪ್ರಯತ್ನ ಮಾಡಿದ್ದರೆ ಎಂದು ದೂರಿದ್ದಾರೆ.

ದಿವಂಗತ ಬಾಲಕಿಯ ಪೋಷಕರನ್ನು ಅವರ ಮನೆಯಲ್ಲಿ ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಇಡೀ ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಈ ಪ್ರಕರಣವನ್ನು ಸಿ ಬಿ ಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.

ಸಿಕ್ಕಿರುವ ಡೆತ್ ನೋಟ್ ಅನ್ನು ಈಗ ಫಾರೆನ್ಸಿಕ್ ಪರೀಕ್ಷೆಗೆ ಕಳುಹಿಸಿದ್ದು ಅದರ ಸತ್ಯಾಸತ್ಯತೆಯ ಬಗ್ಗೆ ಇನ್ನೂ ಮಾಹಿತಿ ಹೊರಬೀಳಬೇಕಿದೆ. ತೀರ್ಥಹಳ್ಳಿ ಸುತ್ತ ಮುತ್ತೆ ಈ ಪ್ರಕರಣ ಕೋಮು ಉದ್ವಿಘ್ನತೆಗೆ ಎಡೆ ಮಾಡಿ ಕೊಟಿದ್ದು, ನವೆಂಬರ್ ೧೦ ರ ವರೆಗೆ ಸೆಕ್ಷನ್ ೧೪೪ ಜಾರಿಯಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.