ಜಿಲ್ಲಾ ಸುದ್ದಿ

ಜನರ ಜತೆ ಚೆಲ್ಲಾಟ ಸಹಿಸಲ್ಲ : ವೈದ್ಯರಿಗೆ ಹೈಕೋರ್ಟ್ ಎಚ್ಚರಿಕೆ

ಜನರ ಜತೆ ಚೆಲ್ಲಾಟ ಸಹಿಸಲ್ಲ : ವೈದ್ಯರಿಗೆ ಹೈಕೋರ್ಟ್ ಎಚ್ಚರಿಕೆ
Published On :

ಬೆಂಗಳೂರು: ಜನರ ಪ್ರಾಣದ ಜತೆ ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ ಎಂದಿ ಹೈಕೋಟ್ ಸರ್ಕಾರಿ ವೈದ್ಯರನ್ನು ಎಚ್ಚರಿಸಿದೆ. ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್ ವಘೇಲ ಮತ್ತು ನ್ಯಾ. ಆರ್. ಬಿ. ಬೂದಿಹಾಳ್ ಅವರ ಪೀಠ, ಸಾಮೂಹಿಕ ರಾಜಿನಾಮೆ ನೀಡಿ ಸಾರ್ವಜನಿಕರಿಗೆ ತೊಂದರೆ ಮಾಡಿದ ಸರ್ಕಾರಿ ವೈದ್ಯರ ವಿರುದ್ಧ ಕಾನೂನಿನಲ್ಲಿ ಕ್ರಮ ತೆಗೆದುಕೊಳ್ಳಬಹುದಾದ ಅವಕಾಶ ತಿಳಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿದೆ. ಸರ್ಕಾರಿ ವೈದ್ಯರು ತಮ್ಮ ಜವಾಬ್ದಾರಿ ಅರಿಯದೆ ಸಾಮೂಹಿಕ ರಾಜಿನಾಮೆ ನೀಡಿದ್ದು, ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕೆಂದು ಕೋರಿ ವಕೀಲ ಎನ್.ಪಿ ಅಮೃತೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.

ಸರ್ಕಾರಕ್ಕೂ ಎಚ್ಚರಿಕೆ : ವೈದ್ಯರು ರಾಜಿನಾಮೆಗೆ ಮುಂದಾದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬಹುದಿತ್ತು. ಆದರೆ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಲಿಲ್ಲ. ವೈದ್ಯರಿಗೂ ತಮ್ಮದೇ ಆದ ತೊಂದರೆಗಳಿರುತ್ತವೆ. ವೈದ್ಯರೇನು ಸರ್ಕಾರದ ಗುಲಾಮರಲ್ಲ ಎಂದು ವಿಭಾಗೀಯ ಪೀಠ ಸರ್ಕಾರದ ಕಾರ್ಯ ವೈಖರಿಗೆ ಅಸಮಧಾನ ವ್ಯಕ್ತಪಡಿಸಿದೆ. ವಿಚಾರಣೆ ವೇಳೆ ಅರ್ಜಿದಾರರಾದ ವಕೀಲ ಅಮೃತೇಶ್ ವಾದ ಮಂಡಿಸಿ, ಈ ಹಿಂದೆ ವೈದ್ಯರು 2 ಬಾರಿ ಮುಷ್ಕರದಲ್ಲಿ ಭಾಗಿಯಾಗಿದ್ದರು. ಆ ವೇಳೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್, ಮುಂದಿನ ದಿನಗಳಲ್ಲಿ ವೈದ್ಯರು ಮುಷ್ಕರದಲ್ಲಿ ತೊಡಗುವಂತಿಲ್ಲ ಎಂದು ಆದೇಶಿಸಿತ್ತು. ಇಷ್ಟಾದರೂ ಧರಣಿ , ರಾಜಿನಾಮೆ ನೀಡುವ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದಾಗಿ ವಿಭಾಗೀಯ ಪೀಠದ ಗಮನಕ್ಕೆ ತಂದರು. ರಾಜಿನಾಮೆ ನೀಡಿದಾಗಲೇ ಸರ್ಕಾರ ಎಚ್ಚೆತ್ತು ಕೊಂಡಿದ್ದರೆ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ. ಯಾವ ಹಂತದಲ್ಲೂ ವೈದ್ಯಕೀಯ ಸೌಲಭ್ಯ ನಿಲ್ಲಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.