ಬಿಎಂಟಿಸಿ ಬಸ್ ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು

ಬಿಎಂಟಿಸಿ ಬಸ್ ಚಾಲಕನ ಅಜಾಗರುತೆ ಇಬ್ಬರು ಅಮಾಯಕ ಬೈಕ್ ಸವಾರರು ಬಲಿ...
ಬಿಎಂಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸಾವು
ಬಿಎಂಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸಾವು
Updated on

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಚಾಲಕನ ಅಜಾಗರುತೆ ಇಬ್ಬರು ಅಮಾಯಕ ಬೈಕ್ ಸವಾರರು ಬಲಿಯಾಗಿದ್ದಾರೆ.

ಇಂದು ಬೆಳಗ್ಗೆ ಸುಮಾರು 7 ಗಂಟೆ ಸಮಯಕ್ಕೆ ಅರವಿಂದ್(25) ಹಾಗೂ ಗಣೇಶ್(28) ಇಬ್ಬರು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಿಂದ ಬೈಕ್‌ನಲ್ಲಿ ಪ್ರಯಾಣ ಬೆಳೆಸಿದ್ದರು. ಅದೇ ವೇಳೆ ಬೊಮ್ಮಸಂದ್ರ ಮುಖ್ಯ ರಸ್ತೆಯಲ್ಲಿ ಬರುತ್ತಿದ್ದ ಬಿಎಂಟಿಸಿ ಬಸ್‌ವೊಂದು ಏಕಾಏಕಿ ಬೈಕ್‌ಗೆ ಡಿಕ್ಕಿ ಹೊಡಿದಿದೆ. ಇದರ ಪರಿಣಾಮ ಅರವಿಂದ್ ಹಾಗೂ ಗಣೇಶ್ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದೀಗ ಮೃತ ಅರವಿಂದ್ ಹಾಗೂ ಗಣೇಶ್ ಕುಟುಂಬದವರು ಬಸ್ ಚಾಲಕನ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದಿದ್ದಾರೆ.

ಘಟನೆಯಿಂದಾಗಿ ಬೊಮ್ಮಸಂದ್ರ ಮುಖ್ಯರಸ್ತೆಯಲ್ಲಿ ಕೆಲಕಾಲ ಬಿಗುವಿವ ವಾತಾವರಣ ಸೃಷ್ಟಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com