ಜಿಲ್ಲಾ ಸುದ್ದಿ
ಗೋಪಾಲನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಯೋಗ ಮೇಳ
ಬೆಂಗಳೂರು: ಗೋಪಾಲನ್ ಎಂಜಿನಿಯರಿಂಗ್ ಮತ್ತು ಮ್ಯಾನೆಜ್ಮೆಂಟ್ ಕಾಲೇಜಿನಲ್ಲಿ ನವೆಂಬರ್ 19 ರಂದು ಉದ್ಯೋಗ ಮೇಳ ಆಯೋಜಿಸಿದೆ.
ಉದ್ಯೋಗ ಮೇಳದಲ್ಲಿ ಸುಮಾರು 15 ಬಹುರಾಷ್ಟ್ರೀಯ ಕಂಪೆನಿಗಳು ಭಾಗವಹಿಸುತ್ತಿದ್ದು, ಅರ್ಹ ಯುವಕ ಹಾಗೂ ಯುವತಿಯರಿಗೆ ಉದ್ಯೋಗವಕಾಶ ನೀಡಲು ಮುಂದಾಗಿವೆ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಎಲ್ಲರಿಗೆ ಮುಕ್ತ ಅವಕಾಶ. ಪ್ರತಿಷ್ಠಿತ ಕಂಪೆನಿಗಳಾದ ಐಬಿಎಂ, ಎಂಫಸಿಸ್, ಆಕ್ಸಿಸ್ ಬ್ಯಾಂಕ್, ಹೆಚ್ಡಿಎಫ್ಸಿ ಬ್ಯಾಂಕ್ ಸೇರಿದಂತೆ ಹಲವು ಪ್ರತಿಷ್ಠಿತ ಕಂಪೆನಿಗಳು ಈ ಮೇಳದಲ್ಲಿ ಪಾಲ್ಗೊಳ್ಳಲಿವೆ. ಯಾವುದೇ ಅನುಭವವಿಲ್ಲದ ಅಭ್ಯರ್ಥಿಗಳು ಕೂಡ ಈ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ - 9686406628
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ