ಬಂಧನ ವಿರೋಧಿಸಿ ಲೈಂಗಿಕ ಅಲ್ಪಸಂಖ್ಯಾತರ ಪ್ರತಿಭಟನೆ

ಭಿಕ್ಷಾಟನೆಯಲ್ಲಿ ತೊಡಗಿರುವ ತೃತೀಯ ಲಿಂಗಿಗಳನ್ನು ಬಂಧಿಸಿ ಭಿಕ್ಷುಕರ ಕೇಂದ್ರಕ್ಕೆ...
ಕರ್ನಾಟಕ ಭಿಕ್ಷಾಟನೆ ಕಾಯ್ದೆಯನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಿ ತೃತಿಯ ಲಿಂಗಿಗಳು ಬುಧವಾರ ಪುರಭವನ ಮುಂಭಾಗ ಪ್ರತಿಭಟನೆ ನಡೆಸಿದರು.
ಕರ್ನಾಟಕ ಭಿಕ್ಷಾಟನೆ ಕಾಯ್ದೆಯನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಿ ತೃತಿಯ ಲಿಂಗಿಗಳು ಬುಧವಾರ ಪುರಭವನ ಮುಂಭಾಗ ಪ್ರತಿಭಟನೆ ನಡೆಸಿದರು.
Updated on: 

ಬೆಂಗಳೂರು: ಭಿಕ್ಷಾಟನೆಯಲ್ಲಿ ತೊಡಗಿರುವ ತೃತೀಯ ಲಿಂಗಿಗಳನ್ನು ಬಂಧಿಸಿ ಭಿಕ್ಷುಕರ ಕೇಂದ್ರಕ್ಕೆ ಕಳುಹಿಸಿರುವ ಪೊಲೀಸರ ಕ್ರಮ ವಿರೋಧಿಸಿ 'ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ' ಸದಸ್ಯರು ಪುರಭವನ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಸೋಮವಾರದಿಂದ ನಗರದ ಸಿಗ್ನಲ್‌ಗಳು, ಅಂಗಡಿಗಳ ಬಳಿ, ಮಾರುಕಟ್ಟೆ ಪ್ರದೇಶದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 150ಕ್ಕೂ ಅಧಿಕ ಭಿಕ್ಷುಕರನ್ನು ಭಿಕ್ಷಾಟನೆ ನಿರ್ಮೂಲನೆ ಕಾಯಿದೆ ಅನ್ವಯ ಪೊಲೀಸರು ವಶಕ್ಕೆ ತೆಗೆದುಕೊಂಡು ಮಾಗಡಿ ರಸ್ತೆಯಲ್ಲಿರುವ ಭಿಕ್ಷುಕರ ಪುನರ್ವಸತಿ ಕೇಂದ್ರಕ್ಕೆ ಬಿಟ್ಟಿದ್ದರು. ಹೀಗಾಗಿ ತೃತಿಯ ಲಿಂಗಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷೆ ಅಕ್ಕೈ ಪದ್ಮಶಾಲೆ 'ಭಿಕ್ಷಾಟನೆ ನಿರ್ಮಾಲನ ಕಾಯ್ದೆ' ಅನುಷ್ಠಾನ ಮಾಡುವ ನೆಪದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಪ್ರಮುಖ ಜಂಕ್ಷನ್, ಅಂಕಡಿ ಮುಂಭಾಗ ಭಿಕ್ಷೆ ಬೇಡುವವರನ್ನು ಬಂಧಿಸಿ, ಭಿಕ್ಷುಕರ ಕೇಂದ್ರಕ್ಕೆ ಬಿಡಲಾಗಿದೆ. ಅಲ್ಲಿ ಸರಿಯಾದ ಊಟ, ನೀರು ಬಟ್ಟೆಕೊಟ್ಟಿಲ್ಲ ಶೌಚಾಗೃಹ ಬಳಸದಂತೆ ತಡೆದು ಹಿಂಸಿಸಲಾಗಿದೆ. ಸಮಾಜದ ಮುಖ್ಯವಾಹಿನಿಗೆ ತರಬೇಕಾದ ಸರ್ಕಾರವೇ ಪೊಲೀಸರ ಮೂಲಕ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com