
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಿನಿವಿಧಾನಸೌದದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಸರ್ಕಾರ ಕೈಗೊಂಡಿದೆ.
ಸಭೆ ಮುಕ್ತಾಯದ ನಂತರ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ವಿಶೇಷ ಸಚಿವ ಸಂಪುಟ ನಡೆಸಿದೆ. ಸಭೆಯಲ್ಲಿ ಅನೇಕ ನಿರ್ಧಾರಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಸ್ಟೇಷನ್ ಬಜಾರ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ ಬಂಡೆ ಅವರ ಪತ್ನಿ ಮಲ್ಲಮ್ಮ ಅವರಿಗೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ನಿವೇಶನ ನೀಡುವುದಕ್ಕೆ ಸಂಪುಟ ಸಭೆ ಅಂಗೀಕಾರ ಮಾಡಿದೆ.
ಹೈದ್ರಾಬಾದ್-ಕರ್ನಾಟಕ ಅಭಿವೃದ್ಧಿಗಾಗಿ 1 ಸಾವಿರ ಕೋಟಿ ಅನುದಾನ ನೀಡಲಿದ್ದು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ತಾಲೂಕು ಪಂಚಾಯತ್ ಮತ್ತು ಗ್ರಾಮಮ ಪಂಚಾಯತ್‌ಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಗೌರವ ಧನ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
-ಹೆಚ್ಚಿನ ಮಾಹಿತಿಗಾಗಿ ನೀರೀಕ್ಷಿಸಲಾಗುತ್ತಿದೆ.
Advertisement