ಜಿಲ್ಲಾ ಸುದ್ದಿ

ಹಿರಿಯ ಪತ್ರಕರ್ತ ಎಂ.ವಿ ಕಾಮತ್ ನಿಧನ

ಹಿರಿಯ  ಪತ್ರಕರ್ತ ಎಂ.ವಿ ಕಾಮತ್ ನಿಧನ
Published On :

ಮಣಿಪಾಲ:  ಹಿರಿಯ ಪತ್ರಕರ್ತ ಎಂ.ವಿ ಕಾಮತ್ ಗುರುವಾರ ನಿಧನರಾಗಿದ್ದಾರೆ. ದೀರ್ಘ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 93 ವಯಸ್ಸಾಗಿತ್ತು.

ಇಂದು ಬೆಳಗ್ಗೆ 7.30ಕ್ಕೆ ಹೃದಯ ಸ್ತಂಭನದಿಂದಾಗಿ ಕಾಮತ್ ಮರಣ ಹೊಂದಿದ್ದಾರೆ ಎಂದು ಕಸ್ತೂರ್ಬಾ ಆಸ್ಪತ್ರೆಯ ಮೆಡಿಕಲ್ ಸುಪರಿಟೆಂಡೆಂಟ್ ಮತ್ತು ಸಿಒಒ ಎಂ. ದಯಾನಂದ ಹೇಳಿದ್ದಾರೆ.

ದ ಇಲ್ಯುಸ್ಟ್ರೇಟೆಡ್ ವೀಕ್ಲಿ ಆಫ್ ಇಂಡಿಯಾದ ಮಾಜಿ ಸಂಪಾದಕ ಮತ್ತು ಪ್ರಸಾರ ಭಾರತಿ ಬೋರ್ಡ್‌ನ  ಮಾಜಿ ಚೇರ್‌ಮೆನ್ ಆಗಿದ್ದ ಕಾಮತ್ ಪದ್ಮ ಭೂಷಣ ಪ್ರಶಸ್ತಿ ವಿಜೇತರಾಗಿದ್ದರು.

1921 ಸೆಪ್ಟೆಂಬರ್ 7ರಂದು ಉಡುಪಿಯಲ್ಲಿ ಜನಿಸಿದ ಇವರು  ಮಣಿಪಾಲದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿದ್ದರು.  ಮಂಗಳೂರಿನ ಸೈಂಟ್ ಅಲೋಸಿಯಸ್ ಕಾಲೇಜ್‌ನಲ್ಲಿ ಬಿಎಸ್ಸಿ ಪದವಿ ಮುಗಿಸಿದ ಇವರು ಮುಂಬೈನಲ್ಲಿ ಫ್ರೀ ಪ್ರೆಸ್ ಜರ್ನಲ್‌ನಲ್ಲಿ ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದ್ದರು.

ಉತ್ತಮ ಲೇಖಕರಾಗಿದ್ದ ಇವರು ಕಾಲಿಂದಿ ರಂದೇರಿ ಅವರೊಂದಿಗೆ ಸೇರಿ ನರೇಂದ್ರ ಮೋದಿ-ದ ಆರ್ಕಿಟೆಕ್ಟ್ ಆಫ್ ಎ ಮಾಡರ್ನ್ ಸ್ಟೇಟ್ (2009), ರಿಪೋರ್ಟರ್ ಅಟ್ ಲಾರ್ಜ್ (2002) ಸೇರಿದಂತೆ ಹಲವಾರು ಪುಸ್ತಕಗಳನ್ನು ರಚಿಸಿದ್ದಾರೆ.

ನೂತನ ರವೀಂದ್ರ ಮಂಟಪದಲ್ಲಿ ಸಾರ್ವಜನಿಕ ದರ್ಶನ:
ಮೃತದೇಹವನ್ನು ಉಡುಪಿಯ ಎಂಜಿಎ ಕಾಲೇಜು ಕ್ಯಾಂಪಸ್‌ನ ನೂತನ ರವೀಂದ್ರ ಮಂಟಪದಲ್ಲಿ ಮಧ್ಯಾಹ್ನ 1 ರಿಂದ ಸಂಜೆ 4 ಗಂಟೆಯ ವರೆಗೆ ಸಾರ್ವಜನಿಕ ದರ್ಶನಕ್ಕಿರಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.