ಜಿಲ್ಲಾ ಸುದ್ದಿ

ಮೊಬೈಲ್ ಐಎಂಇಐ ಸಂಖ್ಯೆ ಬದಲಿಸಿ ಮಾರಾಟ: ಬಂಧನ

ಮೊಬೈಲ್ ಐಎಂಇಐ ಸಂಖ್ಯೆ ಬದಲಿಸಿ ಮಾರಾಟ: ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಳವಾಗಿದ್ದ ಮೊಬೈಲ್ ಫೋನ್‌ಗಳ ಐಎಂಇಐ (ಇಂಟರ್ ನ್ಯಾಷನಲ್ ಮೊಬೈಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ) ಸಂಖ್ಯೆ ಬದಲಾಯಿಸಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಬ್ಯಾಟರಾಯನಪುರ ಪೊಲೀಸರು 103 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರು ರಸ್ತೆ ನಿವಾಸಿ ರಾಜು (38) ಬಂಧಿತರು. ಆರೋಪಿಗಳಿಂದ ಮೊಬೈಲ್ ಫೋನ್‌ಗಳು, ಕಂಪ್ಯೂಟರ್ ಸೇರಿದಂತೆ ಸುಮಾರು ರು.6 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಮೊಬೈಲ್ ಸರ್ವಿಸಿಂಗ್ ಹಾಗೂ ರಿಚಾರ್ಜ್ ಸೆಂಟರ್ ನಡೆಸುತ್ತಿದ್ದರು. ಆದರೆ, ಕಳ್ಳರಿಂದ ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು ಅವುಗಳಿಗೆ ಕೆಟ್ಟು ಹೋಗಿರುವ ಹಳೇ ಮೊಬೈಲ್ ಫೋನ್‌ಗಳ ಐಎಂಇಐ ಸಂಖ್ಯೆಯನ್ನು ಅಳವಡಿಸುತ್ತಿದ್ದರು.

ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಲೆಮರಿಸಿಕೊಂಡಿದ್ದು ಆತನ ಬಂಧನಕ್ಕೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.