ಜಿಲ್ಲಾ ಸುದ್ದಿ

ದಲಿತ ಸಾಹಿತಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ

ದಲಿತ ಸಾಹಿತಿಗೆ ಸಮ್ಮೇಳನಾಧ್ಯಕ್ಷತೆಯ ಗೌರವ
Published On :

ಚಾಮರಾಜನಗರ: 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ದಲಿತ ಸಾಹಿತಿಯನ್ನು ಆಯ್ಕೆ ಮಾಡುವ ಸುಳಿವನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ನೀಡಿದ್ದಾರೆ.

ಕಸಾಪ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಭಾನುವಾರ ನಗರದಲ್ಲಿ ನಡೆದ ದಲಿತ ಸಾಹಿತ್ಯ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಸಾಪ ಇದುವರೆಗೆ 80 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಿದೆ. ಆದರೆ ಸಮ್ಮೇಳನಾಧ್ಯಕ್ಷತೆ ವಿಚಾರದಲ್ಲಿ ದಲಿತ ಸಾಹಿತಿಗಳಿಗೆ ಹೆಚ್ಚಿನ ಅವಕಾಶ ಸಿಕ್ಕಿಲ್ಲ ಎನ್ನುವ ಕೊರಗು ಇದೆ. ಮುಂದಿನ ಸಮ್ಮೇಳನದಲ್ಲಿ ದಲಿತ ಸಾಹಿತಿಯನ್ನು ಅಧ್ಯಕ್ಷರನ್ನಾಗಿಸಲು ಚಿಂತನೆ ನಡೆಸಲಾಗಿದೆ  ಎಂದರು.

ಗದಗ ಸಮ್ಮೇಳನಾಧ್ಯಕ್ಷರಾಗಿದ್ದ ಗೀತಾ ನಾಗಭೂಷಣ ಅವರು ತಳ ಸಮುದಾಯ ದಲಿತ ವರ್ಗದಿಂದಲೇ ಬಂದವರು. ಅವರು ಅರ್ಹತೆಯ ಮೇಲೆ ಸಮ್ಮೇಳನಾಧ್ಯಕ್ಷರಾಗಿದ್ದರು. ದಲಿತರಲ್ಲೂ ಅತ್ಯುತ್ತಮ ಸಾಹಿತಿಗಳಿದ್ದು, ಅವರನ್ನು ಪ್ರೀತಿಯಿಂದ ಮುಖ್ಯವಾಹಿನಿಗೆ ಸೇರಿಕೊಳ್ಳುವ ಅಗತ್ಯವಿದೆ . ಹಾಗೆಯೇ ದೇವನೂರು ಮಹದೇವ ಅವರ ಕುಸುಮಬಾಲೆ ಮತ್ತು ಸಿದ್ಧಲಿಂಗಯ್ಯ ಅವರ ಹೊಲೆ ಮಾದಿಗರ ಹಾಡು ದಲಿತ ಸಂವೇದನೆ ಮತ್ತು ಚಿಂತನೆಯನ್ನು ಹೊರ ಹಾಕುತ್ತವೆ. ದಲಿತರ ಲೇಖನಿಯಿಂದ ಇತರ ವರ್ಗದ ಸಾಹಿತಿಗಳಂತೆ ಶ್ರೇಷ್ಠ ಸಾಹಿತ್ಯ ರಚನೆಯಾಗಿದೆ. ಕಸಪಾ ಹಿಂದಿನ ಅಧ್ಯಕ್ಷರೊಬ್ಬರ ವ್ಯಂಗ್ಯ ಮಾತುಗಳಿಂದಾಗಿ ದಲಿತ ಮತ್ತು ಬಂಡಾಯ ಸಾಹಿತ್ಯ ಹುಟ್ಟಿಕೊಂಡಿತು ಎಂದು ಹಾಲಂಬಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.