ವೇಶ್ಯಾವಾಟಿಕೆಯನ್ನ ಕಾನೂನು ಬದ್ಧ ಗೊಳಿಸಿ: ಮಾತೆ ಮಹಾದೇವಿ

ಧಾರವಾಡ: ವೇಶ್ಯಾವಾಟಿಕೆಯನ್ನ ಕಾನೂನು ಬದ್ಧಗೊಳಿಸಿ ಎಂದು ಬಸವಧಳ ಅಧ್ಯಕ್ಷೆ ಮಾತೆ ಮಹಾದೇವಿ ಸೋಮವಾರ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇಶ್ಯಾವಾಟಿಕೆಯನ್ನು ಕಾನೂನು ಬದ್ಧಗೊಳಿಸಬೇಕು. ಇಲ್ಲವಾದರೆ ಇದು ನಿರಂತರ ನಡೆಯುತ್ತಿರುತ್ತದೆ ಎಂದು ಮಹಾದೇವಿ ತಿಳಿಸಿದ್ದಾರೆ.
ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಂಗಾಂಗ ಕಾಣುವಂತೆ ಉಡುಪು ಧರಿಸುವುದರಿಂದ ಅತ್ಯಾಚಾರಕ್ಕೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದಾರೆ.
ಮಹಿಳೆಯರು ಅಂಗಾಂಗಳು ಕಾಣದಂತೆ ಉಡುಪು ಧರಿಸಬೇಕು. ಅಂಗಾಂಗ ಪ್ರದರ್ಶಿಸಿದರೆ ಅತ್ಯಾಚಾರಕ್ಕೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮಧ್ಯರಾತ್ರಿ ಬಳಿಕ ಮಹಿಳೆಯರು ಓಡಾಡಬಾರದು, ಮನೆಯಿಂದ ಹೊರಗಡೆ ಮಹಿಳೆಯರು ಬರಬಾರದು. ಈ ರೀತಿ ಮಾಡುವುದರಿಂದ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಶ್ರೀ ರಾಘವೇಶ್ವರ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಮೇಲಿರುವ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಆರೋಪ ಸಾಬೀತಾದ್ರೆ ಪೀಠ ತ್ಯಾಗಮಾಡಬೇಕು. ಆರೋಪ ಸಾಬೀತಾದರೆ ನೊಂದ ಯುವತಿಗೆ ತಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


