'ಸೃಷ್ಟಿ'ಕರ್ತನ ವಿರುದ್ಧ ದೂರಿನ ಸರಮಾಲೆ

ಬೆಂಗಳೂರು: ಸೃಷ್ಟಿ ವೆಂಚರ್ಸ್ನ ಕೆ.ಟಿ ಗುರುಮೂರ್ತಿ ಮಕ್ಕಳಿಲ್ಲದ ದಂಪತಿಗೆ ಬಾಡಿಗೆ ತಾಯಿ ಮೂಲಕ ಮಗು ನೀಡುವುದಾಗಿ ಹೇಳಿ ವಂಚಿಸಿದ್ದಾನೆ ಎನ್ನಲಾದ ಸುಮಾರು 40 ಪ್ರಕರಣ ಬೆಳಕಿಗೆ ಬಂದಿವೆ.
ಆತನಿಂದ ವಂಚನೆಗೊಳಗಾದ ಸಾರ್ವಜನಿಕರು ಯಾವುದೇ ಭಯವಿಲ್ಲದೆ ಸಂಬಂಧ ಪಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಿಸುವಂತೆ ಜಂಟಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದರು.
ಅದನ್ನು ಗಮನಿಸಿದ ಸಾರ್ವಜನಿಕರು ಸೋಮವಾರ ಬೆಳಗಿನಿಂದ ನಿಂಬಾಳ್ಕರ್ ಅವರಿಗೆ ಕರೆ ಮಾಡಿ ತಾವು ವಂಚನೆಗೊಳಗಾಗಿದ್ದೇವೆ ಎಂದು ಅವಲತ್ತುಕೊಂಡಿದ್ದಾರೆ.
ಸಂಜೆ ವೇಳೆಗೆ ಸುಮಾರು 40 ಮಂದಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ದೂರುದಾರರಿಂದ ಮಾಹಿತಿ ಸಂಗ್ರಹಿಸಿರುವ ಜಂಟಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ವಂಚನೆಗೊಳಗಾದ ಜನರು ಸಂಬಂಧಪಟ್ಟ ಠಾಣೆಯಲ್ಲಿ ದೂರು ದಾಖಲಿಸುವಂತೆ ಸೂಚಿಸಿದ್ದಾರೆ. ದೂರು ದಾಖಲಿಸಿಕೊಳ್ಳುವಂತೆ ಎಲ್ಲಾ ವಿಭಾಗದ ಡಿಸಿಪಿಗಳಿಗೆ ಸೂಚಿಸಲಾಗಿದೆ.
ದೂರು ದಾಖಲಿಸಿಕೊಳ್ಳದಿದ್ದಲ್ಲಿ ನೇರವಾಗಿ ತಮಗೆ ದೂರು ನೀಡಬಹುದು. ಆ ದೂರುಗಳನ್ನು ಆನಂತರ ಸಂಬಂಧಪಟ್ಟ ಠಾಣೆಗೆ ವರ್ಗಾಯಿಸಲಾಗುವುದು ಎಂದು ನಿಂಬಾಳ್ಕರ್ ತಿಳಿಸಿದ್ದಾರೆ.
ತೀವ್ರ ವಿಚಾರಣೆ: ಈ ನಡುವೆ ಪೊಲೀಸರ ವಶದಲ್ಲಿರುವ ಗುರುಮೂರ್ತಿಯನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು, ಸೋಮವಾರ ಸೃಷ್ಟಿ ವೆಂಚರ್ಸ್ ಬಳಿ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ.
ಸಂಪರ್ಕಿಸಬೇಕಾದ ಸಂಖ್ಯೆ: 9480801011
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


