ನಾನು ಯಾರಿಗೂ ಕಿರುಕುಳ ನೀಡಿಲ್ಲ: ಅಧಿಕಾರಿ ರಶ್ಮಿ ಸ್ಪಷ್ಟನೆ

ಮೈಸೂರು: ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಅಧಿಕಾರಿ ಪತ್ರಾಂಕಿತ ವ್ಯವಸ್ಥಾಪಕ ಎಚ್. ವೆಂಕಟೇಶ್‌ಗೆ ಸೇರಿ ಯಾರಿಗೂ ನಾನು ಕಿರುಕುಳ ನೀಡಿಲ್ಲ ಎಂದು ಐಎಎಸ್ ಅಧಿಕಾರಿ ರಶ್ಮಿ ಮಹೇಶ್ ಹೇಳಿದ್ದಾರೆ.
ಗುರುವಾರ ಮೈಸೂರಿನಲ್ಲಿ ಸುದ್ಧಿಗೊಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯ ಅಧಿಕಾರಿ ಪತ್ರಾಂಕಿತ ವ್ಯವಸ್ಥಾಪಕ ಎಚ್.ವೆಂಕಟೇಶ್ ಸೇರಿದಂತೆ ಎಲ್ಲಾ ಸಿಬ್ಬಂದಿಗಳನ್ನು ನಾನು ಕುಟುಂಬಸ್ಥರಂತೆ ಕಾಣುತ್ತೇನೆ. ಅವರಿಗೆ ನಾನು ಯಾವುದೇ ರೀತಿಯ ಕಿರುಕುಳ ನೀಡಿಲ್ಲ ಎಂದು ತಿಳಿಸಿದ್ದಾರೆ.
ಮೈಸೂರಿನ ಆಡಳಿತ ತರಬೇತಿ ಕೇಂದ್ರದಲ್ಲಿ ಹಲವು ಅವ್ಯವಹಾರ ನಡೆದಿದೆ. ಈ ಬಗ್ಗೆ ನಾನು ರಾಜ್ಯ ಸರ್ಕಾರಕ್ಕೂ ವರದಿ ಸಲ್ಲಿಸಿದ್ದೇನೆ. ಪ್ರಾಮಾಣಿಕವಾಗಿ ನಾನು ನನ್ನ ಕೆಲಸ ಮಾಡುತ್ತಿದ್ದೇನೆ ಹೊರತು, ಯಾರಿಗು ಕಿರುಕುಳ ನೀಡುತ್ತಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನ ಆಡಳಿತ ತರಬೇತಿ ಕೇಂದ್ರಕ್ಕೆ ಸಿಬ್ಬಂದಿ ನೇಮಕಾತಿಯಲ್ಲಿ ತುಂಬಾ ಅವ್ಯವಹಾರ ನಡೆದಿದೆ. ಈ ಸಂಬಂಧ ಅಂಕಿ ಅಂಶಗಳ ಸಮೇಥ ಸ್ಪಷ್ಟ ವರದಿ ನೀಡಿದ್ದೇನೆ. ಪಾರದರ್ಶಕವಾಗಿ ಸಿಬ್ಬಂದಿ ನೇಮಕಾತಿ ನಡೆದಿಲ್ಲ. ವೆಂಕಟೇಶ್‌ಗೆ ನಾನು ಯಾವುದೇ ನೋಟಿಸ್ ನೀಡಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಸಂಸ್ಥೆಯ ಅಧಿಕಾರಿ ಪತ್ರಾಂಕಿತ ವ್ಯವಸ್ಥಾಪಕ ಎಚ್.ವೆಂಕಟೇಶ್ ಬುಧವಾರ ಅನುಮಾನಸ್ಪದವಾಗಿ ಮೃತಪಟ್ಟಿದ್ದರು. ಅವರ ಅಂತಿಮ ದರ್ಶನಕ್ಕೆಂದು ರಶ್ಮಿ ಮೃತರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಂಬಂಧಿಕನೊಬ್ಬ ಈ ಕೃತ್ಯವೆಸಗಿದಾದರೆ. ವೆಂಕಟೇಶ್ ಆತ್ಮಹತ್ಯೆಗೆ ಕಿರುಕುಳವೇ ಕಾರಣವೆಂಬ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


