ಜಿಲ್ಲಾ ಸುದ್ದಿ

ಅತ್ಯಾಚಾರ ಪ್ರಕರಣ ತಡೆ; ನಾಣಯ್ಯ ಸಮಿತಿ ಚರ್ಚೆ

ಅತ್ಯಾಚಾರ ಪ್ರಕರಣ ತಡೆ;  ನಾಣಯ್ಯ ಸಮಿತಿ ಚರ್ಚೆ
Published On :

ಬೆಂಗಳೂರು: ಅತ್ಯಾಚಾರ ಪ್ರಕರಣ ತಡೆಯುವುದಕ್ಕೆ ನಿಯಮ ರೂಪಿಸಲು ಮಾಜಿ ಸಚಿವ ಎಂ.ಸಿ. ನಾಣಯ್ಯ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಯ ಮೊದಲ ಸಭೆ ಬುಧವಾರ ನಡೆಯಿತು.

ವಿಕಾಸಸೌಧದಲ್ಲಿ   ನಡೆದ ಸಭೆಯಲ್ಲಿ ಸಮಿತಿ ಸದಸ್ಯರು, ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು, ಯುನಿಸೆಫ್ ಹಾಗೂ ಇತರೆ ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಕೆಲಸ ಮಾಡಿದ ತಜ್ಞರು, ಲೈಂಗಿಕ ಕಾರ್ಯಕರ್ತರ ಪರವಾಗಿ ಕೆಲಸ ಮಾಡಿದ ಸಂಘಟನೆಗಳ  ಕಾರ್ಯಕರ್ತರು, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ  ನಾಣಯ್ಯ , ಇದು ಮೊದಲ ಸಭೆ. ಹೀಗಾಗಿ ಸಮಿತಿಯ ಮೂಲ ಉದ್ದೇಶ, ಧ್ಯೇಯದ ಬಗ್ಗೆ ಚರ್ಚೆ ನಡೆದಿದೆ.  ಆದಾಗ್ಯೂ ಸಭೆಯಲ್ಲಿ ಹಲವು ವಿಚಾರಗಳು ಪ್ರಸ್ತಾಪವಾಗಿದ್ದು, ಇನ್ನು ಹದಿನೈದು ದಿನಗಳ ನಂತರ ಮತ್ತೆ ಸಭೆ ಸೇರಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಪ್ರಾಥಮಿಕ ಸಭೆಯಲ್ಲಿ ವೇಶ್ಯಾವಾಟಿಕೆ ಕಾನೂನುಬದ್ಧಗೊಳಿಸುವ ಬಗ್ಗೆ ಪ್ರಸ್ತಾಪವಾಗಿದೆ. ಭಾರತೀಯ ಸಮಾಜ ಮತ್ತು ಕಾನೂನು ಪರಿಮಿತಿಯಲ್ಲಿ ಇದನ್ನು ಹೇಗೆ ಒಪ್ಪಿಕೊಳ್ಳಲು ಸಾಧ್ಯ?  ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಸುತ್ತೇವೆ.

ಮಾತೆ ಮಹಾದೇವಿ, ಕವಿ ನಿಸಾರ್ ಅಹ್ಮದ್ ಮೊದಲಾದವರು ಈ ವಿಚಾರ ಪ್ರಸ್ತಾಪಿಸಿದ್ದು, ಸಾರ್ವಜನಿಕ ಚರ್ಚೆ ನಡೆಯುತ್ತಿದೆ. ಈ ಎಲ್ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು. ನಿರ್ಭಯಾ ಪ್ರಕರಣದ ನಂತರ ಅತ್ಯಾಚಾರ ಕಾಯ್ದೆಯಲ್ಲಿ  ಸಾಕಷ್ಟು ಬದಲಾವಣೆಗಳಾಗಿವೆ. ಈ ಹಿನ್ನೆಲೆಯಲ್ಲಿ ಅಪರಾಧ ನ್ಯಾಯ ಪ್ರಕ್ರಿಯೆಯಲ್ಲಿ ಸುಧಾರಣೆಯಾಗಬೇಕಿದೆ. ಜತೆಗೆ ಸಮ್ಮತಿಯ ಸಹಜೀವನ ನಡೆಸಿ ಬೇರೆಯಾದವರು ಸುಳ್ಳು ಮೊಕದ್ದಮೆ ದಾಖಲಿಸುವ ಪ್ರಕರಣಗಳೂ ವರದಿಯಾಗುತ್ತಿವೆ. ಇವೆಲ್ಲದರ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.