ಜಿಲ್ಲಾ ಸುದ್ದಿ

ಅಧಿಕಾರಿ ರಶ್ಮಿಗೆ ಚಪ್ಪಲಿ ಎಸೆತೆ: ತನಿಖೆಗೆ ಆದೇಶಿಸಿದ ಸಿಎಂ

ಅಧಿಕಾರಿ ರಶ್ಮಿಗೆ ಚಪ್ಪಲಿ ಎಸೆತೆ: ತನಿಖೆಗೆ ಆದೇಶಿಸಿದ ಸಿಎಂ
Published On :

ಬೆಂಗಳೂರು: ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಮಹಾ ನಿರ್ದೇಶಕಿ ರಶ್ಮಿ ಮಹೇಶ್ ಮೇಲೆ ವ್ಯಕ್ತಿಯೊಬ್ಬರು ಬುಧವಾರ ಚಪ್ಪಲಿ ಬೀಸಿರುವ ಪ್ರಕರಣ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರು ಮಾಡಿದ್ದ, ಈ ಕಾರಣಕ್ಕಾಗಿಯೇ ವರ್ಗಾವಣೆ ಕೊಡುಗೆ ಪಡೆಯುತ್ತಿರುವ ರಶ್ಮಿ ಮಹೇಶ್ ಅವರಿಗೆ ವ್ಯಕ್ತಿಯೊಬ್ಬರು ಬುಧವಾರ ಚಪ್ಪಲಿ ಬೀಸಿದ್ದರು.

ಈ ಬಗ್ಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುವಂತೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇತ್ತ ಮೈಸೂರಿನಲ್ಲಿ ರಶ್ಮಿ ಮಹೇಶ್ ಅವರು ನಜಾರ್‌ಬಾದ್ ಪೊಲೀಸ್ ಠಾಣೆಯಲ್ಲಿ ತಮ್ಮ ಮೇಲೆ ಹಲ್ಲೆ ಮಾಡಿರುವ ಕುರಿತು ದೂರು ದಾಖಲಿಸಿದ್ದಾರೆ.

ರಶ್ಮಿ ನೀಡಿರುವ ಕಿರುಕುಳದಿಂದ ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ಅಧಿಕಾರಿ ರಶ್ಮಿ ವಿರುದ್ಧ ದೂರು ದಾಖಲಿಸಿದ್ದಾರೆ. ಮೈಸೂರಿನ ಪೊಲೀಸರು 19 ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಸ್ಥೆಯ ಅಧಿಕಾರಿ ಪತ್ರಾಂಕಿತ ವ್ಯವಸ್ಥಾಪಕ ಎಚ್.ವೆಂಕಟೇಶ್ ಬುಧವಾರ ಅನುಮಾನಸ್ಪದವಾಗಿ ಮೃತಪಟ್ಟಿದ್ದರು. ಅವರ ಅಂತಿಮ ದರ್ಶನಕ್ಕೆಂದು ರಶ್ಮಿ ಮೃತರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಂಬಂಧಿಕನೊಬ್ಬ ಈ ಕೃತ್ಯವೆಸಗಿದಾದರೆ. ವೆಂಕಟೇಶ್ ಆತ್ಮಹತ್ಯೆಗೆ ಕಿರುಕುಳವೇ ಕಾರಣವೆಂಬ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.