ಜಿಲ್ಲಾ ಸುದ್ದಿ

ಕರ್ನಾಟಕ ವಿವಿ ಕುಲಪತಿ ವಾಲೀಕಾರ್ ಬಂಧನ

ಕರ್ನಾಟಕ ವಿವಿ ಕುಲಪತಿ ವಾಲೀಕಾರ್ ಬಂಧನ
Published On :

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಹೆಚ್.ಬಿ.ವಾಲೀಕಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಭ್ರಷ್ಟಚಾರ ಹಗರಣ ಸಂಬಂಧ ಡಾ.ವಾಲೀಕಾರ್ ಸೇರಿದಂತೆ ವಿವಿಯ ಒಟ್ಟು ನಾಲ್ಕು ಮಂದಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್.ಪಿ.ಪರಶುರಾಮ್ ಅವರ ನೇತೃತ್ವದಲ್ಲಿ ಧಾರವಾಡ ವಿಶ್ವವಿದ್ಯಾಲಯದ ಕಚೇರಿ ಆವರಣದಲ್ಲೇ ವಾಲೀಕಾರ್ ಅವರನ್ನು ಬಂಧಿಸಲಾಗಿದೆ. ವಾಲೀಕಾರ್ ಅವರು ಸೇರಿದಂತೆ ವಿವಿಯ ಹಣಕಾಸು ವಿಭಾಗದ ಅಧಿಕಾರಿ ರಾಜಶ್ರೀ, ಕುಲಪತಿಗಳ ಆಪ್ತ ಕಾರ್ಯದರ್ಶಿ ಎಸ್.ಎಲ್.ಬೀಳಗಿ, ವಿವಿ ಪರೀಕ್ಷಾ ವಿಭಾಗದ ಕುಲಸಚಿವ ಹೆಚ್.ಡಿ.ಪೋತೆ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಡೆದಿದ್ದ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳ ನೇಮಕಾತಿ ವೇಳೆ ವ್ಯಾಪಕ ಅಕ್ರಮಗಳು ನಡೆದಿದ್ದು, ಈ ಕುರಿತು ರಾಜ್ಯಪಾಲರಲ್ಲಿ ಹಲವು ಬಾರಿ ದೂರುಗಳು ದಾಖಲಾಗಿದ್ದವು. ಇದೇ ವಿಚಾರ ವಿವಿಯ ಕುಲಪತಿ ಮತ್ತು ರಿಜಿಸ್ಟ್ರಾರ್‌ಗಳ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ವಿವಿಯ ಹಲವು ಕಾರ್ಯಕ್ರಮಗಳಲ್ಲಿ ಇದು ಬಿಂಬಿತವಾಗಿತ್ತಾದರೂ ಇತ್ತೀಚೆಗೆ ಇದು ಬಹಿರಂಗಗೊಂಡಿತ್ತು. ಈ ಹಿನ್ನಲೆಯಲ್ಲಿ ರಾಜ್ಯಪಾಲರು ನ್ಯಾ.ಬಿ. ಪದ್ಮರಾಜ ಅವರ ನೇತೃತ್ವದಲ್ಲಿ ತನಿಖಾ ಸಮಿತಿಯೊಂದನ್ನು ರಚನೆ ಮಾಡಿದ್ದರು. ಪ್ರಕರಣದ ತನಿಖೆಯ ಜವಾಬ್ದಾರಿ ವಹಿಸಿಕೊಂಡ ನ್ಯಾ. ಪದ್ಮರಾಜ ಆಯೋಗ ಸುಧೀರ್ಘ ತನಿಖೆ ನಡೆಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ಇತ್ತೀಚೆಗೆ ರಾಜ್ಯಪಾಲರಿಗೆ ತನ್ನ ವರದಿಯನ್ನು ನೀಡಿತ್ತು.

ಇತ್ತೀಚೆಗೆ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ವಜುಭಾಯಿ ವಾಲಾ ಅವರು ವಿವಿಯಲ್ಲಿನ ಭ್ರಷ್ಟಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ಕುರಿತು ತನಿಖೆಗೆ ಆದೇಶ ನೀಡಿದ್ದರು. ತನಿಖೆಯ ಜವಾಬ್ದಾರಿ ವಹಿಸಿಕೊಂಡ ಲೋಕಾಯುಕ್ತ ಸಂಸ್ಥೆ ಸತತ ವಿಚಾರಣೆ ನಡೆಸಿದ್ದು, ಇಂದು ವಿವಿ ಕಚೇರಿಯ ಆವರಣದಲ್ಲಿಯೇ ಡಾ.ಹೆಚ್.ವಾಲೀಕಾರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.