ಜಿಲ್ಲಾ ಸುದ್ದಿ

ಕರ್ನಾಟಕ ವಿವಿ ಅವ್ಯವಹಾರ ಪ್ರಕರಣ ವಿಚಾರಣೆ ಅ.28ಕ್ಕೆ ಮುಂದೂಡಿಕೆ

ಕರ್ನಾಟಕ ವಿವಿ ಅವ್ಯವಹಾರ ಪ್ರಕರಣ ವಿಚಾರಣೆ ಅ.28ಕ್ಕೆ ಮುಂದೂಡಿಕೆ
Published On :

ಧಾರವಾಡ: ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಡೆದಿದ್ದ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳ ನೇಮಕಾತಿ ವೇಳೆ ವ್ಯಾಪಕ ಅಕ್ರಮಗಳು ನಡೆದಿದ್ದು, ಈ ಕುರಿತು ರಾಜ್ಯಪಾಲರಲ್ಲಿ ಹಲವು ಬಾರಿ ದೂರುಗಳು ದಾಖಲಾಗಿದ್ದವು.

ಇದೇ ವಿಚಾರ ವಿವಿಯ ಕುಲಪತಿ ಮತ್ತು ರಿಜಿಸ್ಟ್ರಾರ್‌ಗಳ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ವಿವಿಯ ಹಲವು ಕಾರ್ಯಕ್ರಮಗಳಲ್ಲಿ ಇದು ಬಿಂಬಿತವಾಗಿತ್ತಾದರೂ ಇತ್ತೀಚೆಗೆ ಇದು ಬಹಿರಂಗಗೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ನ್ಯಾ.ಬಿ ಪದ್ಮರಾಜ ಅವರ ನೇತೃತ್ವದಲ್ಲಿ ತನಿಖಾ ಸಮಿತಿಯೊಂದನ್ನು ರಚನೆ ಮಾಡಿದ್ದರು. ನ್ಯಾ.ಪದ್ಮರಾಜ ಆಯೋಗ ಸುಧೀರ್ಘ ತನಿಖೆ ನಡೆಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ಇತ್ತೀಚೆಗೆ ರಾಜ್ಯಪಾಲರಿಗೆ ತನ್ನ ವರದಿಯನ್ನು ನೀಡಿತ್ತು. ವಿವಿಯಲ್ಲಿನ ಭ್ರಷ್ಟಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ಕುರಿತು ತನಿಖೆಗೆ ಆದೇಶ ನೀಡಿದ್ದರು.

ತನಿಖೆ ಕೈಗೊಂಡ ಲೋಕಾಯುಕ್ತ ಪೊಲೀಸರು ಕರ್ನಾಟಕ ವಿವಿ ಕುಲಪತಿ ಡಾ.ಹೆಚ್ ವಾಲೀಕಾರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ಇಂದು ಈ ಪ್ರಕರಣ ಕುರಿತು ನಡೆಯಬೇಕಿದ್ದ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ಅಕ್ಟೋಬರ್ 28ಕ್ಕೆ ಮುಂದೂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.