ಜಿಲ್ಲಾ ಸುದ್ದಿ

ಆರ್ಕಿಡ್ಸ್ ಶಾಲೆ ಸೋಮವಾರ ಪುನಾರಂಭ

ಆರ್ಕಿಡ್ಸ್ ಶಾಲೆ ಸೋಮವಾರ ಪುನಾರಂಭ
Published On :

ಬೆಂಗಳೂರು: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಿಂದಾಗಿ ಬಾಗಿಲು ಹಾಕಿದ್ದ ಆರ್ಕಿಡ್ಸ್ ಶಾಲೆಯನ್ನು ಸೋಮವಾರದಿಂದ ಪುನಾರಂಭ ಮಾಡಲು ಪೋಷಕರ ಸಭೆಯಲ್ಲಿ ನಿರ್ಧರಿಸಲಾಗಿದೆ.

3 ವರ್ಷದ ಪುಟ್ಟ ಬಾಲಕಿ ಮೇಲೆ ನಡೆದ ಪೈಶಾಚಿಕ ಕೃತ್ಯದ ಬಳಿಕ ವಿವಾದಕ್ಕೀಡಾಗಿದ್ದ ಆರ್ಕಿಡ್ಸ್ ಶಾಲೆಯನ್ನು ಇದೇ ಸೋಮವಾರದಿಂದ ಪುನಾರಂಭಗೊಳಿಸಲು ಇಂದು ನಡೆದ ಪೋಷಕರಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ನೇತೃತ್ವದಲ್ಲಿ ಇಂದು ನಡೆದ ಪೋಷಕರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಮಕ್ಕಳ ಸುರಕ್ಷತೆ ಕುರಿತಂತೆ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಪ್ರಮುಖವಾಗಿ ಮಕ್ಕಳ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಶಾಲೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತೆಯೇ ಮಕ್ಕಳನ್ನು ಮನೆಗಳಿಗೆ ಬಿಡುವ ಶಾಲಾ ಬಸ್‌ನಲ್ಲಿ ತಾತ್ಕಾಲಿಕವಾಗಿ ಓರ್ವ ಪೇದೆಯನ್ನು ನೇಮಿಸಬೇಕು ಎಂದೂ ಸಹ ಪೋಷಕರು ಮನವಿ ಮಾಡಿದ್ದಾರೆ. ಪೋಷಕರ ಒತ್ತಾಯಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಇಂದು ಸಂಜೆ ಆರ್ಕಿಡ್ಸ್ ಶಾಲೆಯ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಮತ್ತು ಜಂಟಿ ಸಹಾಯಕ ಆಯುಕ್ತ ಅಲೋಕ್ ಕುಮಾರ್ ಅವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.