ಜಿಲ್ಲಾ ಸುದ್ದಿ

'ಆರ್ಕಿಡ್ಸ್‌': ಆರೋಪಿ ಗುಂಡಪ್ಪನಿಗೆ 6 ದಿನ ನ್ಯಾಯಾಂಗ ಬಂಧನ

'ಆರ್ಕಿಡ್ಸ್‌': ಆರೋಪಿ ಗುಂಡಪ್ಪನಿಗೆ 6 ದಿನ ನ್ಯಾಯಾಂಗ ಬಂಧನ
Published On :

ಬೆಂಗಳೂರು: ಬೆಂಗಳೂರಿನ ಆರ್ಕಿಡ್ಸ್ ಶಾಲೆಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದ್ದ ಆರೋಪಿ ಗುಂಡಪ್ಪನನ್ನು 6 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರಿನ ಜಾಲಹಳ್ಳಿ ಬಳಿ ಇರುವ ಆರ್ಕಿಡ್ಸ್ ದಿ ಇಂಟರ್‌ನ್ಯಾಷನ್ ಶಾಲೆಯ 3 ವರ್ಷದ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಪೈಶಾಚಿಕ ಕೃತ್ಯಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಗುಂಡಪ್ಪನನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆರೋಪಿಯ ವಿಚಾರಣೆ ನಡೆಸಿದ 51ನೇ ವಿಶೇಷ ಕೋರ್ಟ್‌ನ ನ್ಯಾಯಾಧೀಶೆ ಶುಭಾಗೌಡರ್ ಅವರು ಗುಂಡಪ್ಪನನ್ನು 6 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿಚಾರಣೆಗೆ ಮೊದಲು ಪೊಲೀಸರು ಗುಂಡಪ್ಪನನ್ನು ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಬಳಿಕ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆಗೆ ಆರೋಪಿ ಗುಂಡಪ್ಪನನ್ನು ಕರೆದೊಯ್ಯಲಾಗಿತ್ತು. ಆರೋಪಿ ಗುಂಡಪ್ಪ ಆರ್ಕಿಡ್ಸ್ ಶಾಲೆಯ ಕಚೇರಿಯ ಸಹಾಯಕ ಸಿಬ್ಬಂದಿಯಾಗಿದ್ದು, ಪ್ರಕರಣ ಬೆಳಕಿಗೆ ಬಂದ ಬಳಿಕ ನಾಪತ್ತೆಯಾಗಿದ್ದನು. ಪ್ರಕರಣ ದಾಖಲಿಸಿಕೊಂಡಿದ್ದ ಜಾಲಹಳ್ಳಿ ಪೊಲೀಸರು ಗುಂಡಪ್ಪನ ಬಂಧನಕ್ಕೆ ಬಲೆ ಬೀಸಿದ್ದರು. ಆದರೆ ನಿನ್ನೆ ಕಾರ್ಯಾಚರಣೆ ನಡೆಸಿದ್ದ ಕೇಂದ್ರೀಯ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಗುಂಡಪ್ಪನನ್ನು ಬಂಧಿಸಿದ್ದರು.

ಪ್ರಸ್ತುತ ಆರೋಪಿ ಗುಂಡಪ್ಪನನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಜಾಲಹಳ್ಳಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.