ಬೆಳಗಾವಿಯಲ್ಲೇ ಅಧಿವೇಶನ ನಡೆಯಲಿದೆ: ಸರ್ಕಾರ

ಬೆಂಗಳೂರು: ಚಳಿಗಾಲದ ವಿಧಾನಸಭೆಯ ಅಧಿವೇಶನವನ್ನು ನವೆಂಬರ್ ಕೊನೆಯ ವಾರದಲ್ಲಿ ಅಥವಾ ಡಿಸೆಂಬರ್ ಮೊದಲವಾರದಲ್ಲಿ ಬೆಳಗಾವಿಯಲ್ಲೇ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ ಬಿ ಜಯಚಂದ್ರ ತಿಳಿಸಿದ್ದಾರೆ.
ವರದಿಗಾರರೊಂದಿಗೆ ಮಾತನಾಡುತ್ತ, ಸಭಾಪತಿ ಕಾಗೋಡು ತಿಮ್ಮಪ್ಪನವರು ಬೆಳಗಾವಿಯ ವಿಧಾನಸಭಾ ಅಧಿವೇಶನದ ದಿನಾಂಕ ಅಂತಿಮ ಮಾಡಲು ನನಗೆ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರ ಬರೆದಿದ್ದರು. ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಯಾವತ್ತೂ ಮುಜುಗರ ಪಟ್ಟಿಲ್ಲ ಎಂದು ಜಯಚಂದ್ರ ಒತ್ತಿಹೇಳಿದರು. "ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ದಿನಾಂಕಗಳನ್ನು ಅಂತಿಮಗೊಳಿಸುತ್ತೇವೆ" ಎಂದ ಸಚಿವರು, ಸಭಾಪತಿ ಕಾಗೋಡು ತಿಮ್ಮಪ್ಪನವರು ಬೆಳಗಾವಿ ಅಧಿವೇಶನವನ್ನು ೧೭ ದಿನಗಳ ಕಾಲ ನಡೆಸುವಂತೆ ಸೂಚಿಸಿದ್ದಾರೆ ಎಂದರು.
ಇದರಿಂದ ವಿಧಾನಸಭೆಯ ಅಧಿವೇಶನ ಕನಿಷ್ಟ ೬೦ ದಿನಗಳು ಪೂರೈಸಿದಂತಾಗುತ್ತದೆ ಎಂದ ಸಚಿವರು ಸರ್ಕಾರ ಬೆಳಾಗಿವಿಯಲ್ಲಿ ಅಧಿವೇಶನ ನಡೆಸುವದಕ್ಕೆ ಮೀನಮೇಷ ಎಣಿಸುತ್ತಿದೆ ಎಂಬ ವಿರೋಧ ಪಕ್ಷದ ಆಪಾದನೆಯನ್ನು ತಳ್ಳಿಹಾಕಿದರು. ಕಬ್ಬು ಬೆಳೆಯುವ ರೈತರ ಹೋರಾಟದ ಭಯದಿಂದ ಸರ್ಕಾರ ಬೆಳಗಾವಿಯಲ್ಲಿ ಸೆಶನ್ ನಡೆಸಲು ಹಿಂಜರಿಯುತ್ತಿದೆ ಎಂದು ಇತ್ತೀಚಿಗೆ ಜೆ ಡಿ ಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ದೂರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


