ಜಿಲ್ಲಾ ಸುದ್ದಿ

ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Published On :

ಮಂಗಳೂರು: ಮತಾಂತರಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೇರೇಬೈಲ್ ಕೊಂಚಾಡಿಯ ನಿವಾಸಿ 23 ವರ್ಷದ ರೂಪರ್ಟ್​ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದೆ.

ನ್ಯೂ ಲೈಫ್ ಎಂಬ ಮತಾಂತರ ತಂಡವೊಂದು ರೂಪರ್ಟ್ ಕುಟುಂಬಕ್ಕೆ ಆಮಿಷವೊಡ್ಡಿತ್ತು. ರೂಪರ್ಟ್ ತಂದೆ ಮತ್ತು ಸಹೋದರಿಯರು ಮತಾಂತರ ಹೊಂದಿದ್ದರು. ಆದರೆ, ರೂಪರ್ಟ್ ಮಾತ್ರ ಕ್ರಿಶ್ಚಿಯನ್ ಧರ್ಮ ತೊರೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲೇ ನ್ಯೂ ಲೈಫ್ ತಂಡ ಹಲ್ಲೆ ನಡೆಸಿದೆ. ಘಟನೆಯ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.