ಜಿಲ್ಲಾ ಸುದ್ದಿ

ಕಂಬಿ ಕದಿಯಲು ಬಂದಿದ್ದ ಕಳ್ಳರ ಮೇಲೆ ಗುಂಡಿನ ದಾಳಿ

ಕಂಬಿ ಕದಿಯಲು ಬಂದಿದ್ದ ಕಳ್ಳರ ಮೇಲೆ ಗುಂಡಿನ ದಾಳಿ
Published On :

ಬೆಂಗಳೂರು: ಕಬ್ಬಿಣದ ಕಂಬಿಗಳನ್ನು ಕದಿಯಲು ಬಂದಿದ್ದ ಕಳ್ಳರ ಮೇಲೆ ಸೆಕ್ಯೂರಿಟಿ ಗಾರ್ಡ್‌ಗಳು ಗುಂಡು ಹಾರಿಸಿರುವ ಘಟನೆ ನಗರದ ದೊಮ್ಮಸಂದ್ರದಲ್ಲಿ ನಡೆದಿದೆ.

ನಗರದ ದೊಮ್ಮಸಂದ್ರದಲ್ಲಿರುವ ನಾರಾಯಣ ಲೈಔಟ್‌ನಲ್ಲಿ ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದೆ.

ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕಬ್ಬಿಣದ ಕಂಬಿಗಳನ್ನು ಕದಿಯಲು ಕಳ್ಳರು ಬಂದಿದ್ದರು. ಈ ವೇಳೆ ಅಲ್ಲೇ ಸೆಕ್ಯೂರಿಟಿ ಗಾರ್ಡ್‌ಗಳಾಗಿದ್ದ ಸಂತೋಷ್ ಮತ್ತು ಉತ್ತಪ್ಪ ಕಳ್ಳರನ್ನು ಓಡಿಸಲು ಯತ್ನಿಸಿದ್ದಾರೆ. ಕಳ್ಳರು ಗಾರ್ಡ್‌ಗಳ ಮೇಲೆ ಕಲ್ಲುಗಳನ್ನು ಎಸೆದು ದಾಳಿ ಮಾಡಿದ್ದಾರೆ. ಹಾಗಾಗಿ, ಸೆಕ್ಯೂರಿಟಿಗಳು ಕಳ್ಳರ ಮೇಲೆ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಕದಿಯಲು ಬಂದಿದ್ದ ಕಿಶೋರ್ ಎಂಬುವವನು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.