ಜಿಲ್ಲಾ ಸುದ್ದಿ

ಇಂದು ಕಾರ್ತಿಕ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಇಂದು ಕಾರ್ತಿಕ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
Published On :

ಬೆಂಗಳೂರು: ನಟಿ ಮೈತ್ರಿಯಾ ಗೌಡಗೆ ವಂಚನೆ ಪ್ರಕರಣ ಸಂಬಂಧ ಕೇಂದ್ರ ಸಚಿವ ಡಿವಿಎಸ್ ಪುತ್ರ ಕಾತೀಕ್‌ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಇಂದು ಮಧ್ಯಾಹ್ನ ಕಾರ್ತಿಕ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಕೋರ್ಟ್‌ನ ಮುಂದಿನ ಆದೇಶದವರೆಗೂ ಕಾರ್ತಿಕ್‌ಗೌಡ ಪೊಲೀಸರ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ.

ಅರ್ಜಿ ವಿಚಾರಣೆ ವೇಳೆ ಕಾರ್ತಿಕ್‌ಗೌಡಗೆ ಜಾಮೀನು ನೀಡಬಾರದು ಎಂದು ಪೊಲೀಸರು ಆಕ್ಷೇಪಣೆ ಸಲ್ಲಿಸಲ್ಲಿದ್ದಾರೆ.

ಕೇಂದ್ರ ಸಚಿವ ಡಿ.ವಿ ಸದಾನಂದಾಗೌಡ ಪುತ್ರ ಕಾರ್ತಿಕ್ ಗೌಡ ವಿರುದ್ಧ ನಟಿ ಮೈತ್ರಿಯಾ ಗೌಡ ಅತ್ಯಾಚಾರ, ಅಪಹರಣ ಹಾಗೂ ವಂಚನೆ ಆರೋಪದಡಿ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಆರ್.ಟಿ ನಗರ ಪೊಲೀಸರು ತನಿಖೆ ಕೈಗೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೌಡಗೆ ಸೆಪ್ಟೆಂಬರ್ 1ರಂದು ನೋಟೀಸ್ ನೀಡಿದ್ದರು. ಸೆಪ್ಟೆಂಬರ್ 3ರೊಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ತಿಳಿಸಿದ್ದರು. ಆದರೆ ಕಾರ್ತಿಕ್‌ಗೌಡ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದ್ದು, ನಿನ್ನೆ ಸಂಜೆಯೊಳಗೆ ಕಾರ್ತಿಕ್ ವಿಚಾರಣೆಗೆ ಹಾಜರಾಗದಿದ್ದರೆ, ಇಂದು ಪೊಲೀಸರು ಅವರನ್ನು ಬಂಧಿಸುವ ಸಾಧ್ಯತೆ ಇತ್ತು.

ಐಪಿಸಿ ಸೆಕ್ಷನ್ 420 ಮತ್ತು 376ರ ಅಡಿಯಲ್ಲಿ ಕಾರ್ತಿಕ್ ವಿರುದ್ಧ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.