ಜಿಲ್ಲಾ ಸುದ್ದಿ

ಕಾರ್ತಿಕ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಕಾರ್ತಿಕ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Published On :

ಬೆಂಗಳೂರು: ಮೈತ್ರಿಯಾ ಗೌಡ ಮತ್ತು ಕಾರ್ತಿಕ್‌ಗೌಡ ಅವರ ವಿವಾ(ದ)ಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಷನ್ಸ್ ನ್ಯಾಯಾಲಯ ಮುಂದೂಡಿದೆ.

ಕೇಂದ್ರ ರೇಲ್ವೇ ಸಚಿವ ಸದಾನಂದಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ವಿರುದ್ಧ ನಟಿ ಮೈತ್ರಿಯಾ ಗೌಡ ಅವರು ಅತ್ಯಾಚಾರ, ಅಪಹರಣ ಪ್ರಕರಣಗಳ ಅಡಿಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ಸಂಬಂಧ ಕಾರ್ತಿಕ್ ಗೌಡ ಅವರು ನಿರೀಕ್ಷಣಾ ಜಾಮೀನು ಬಯಸಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇದಕ್ಕೂ ಮೊದಲು ಪ್ರಕರಣದ ಆರೋಪಿಯಾಗಿರುವ ಕಾರ್ತಿಕ್ ಅವರು ಪ್ರಾಸಿಕ್ಯೂಷನ್‌ಗೆ ಸಹಕರಿಸಬೇಕು ಎಂದು ಕೋರಿ ಮೈತ್ರಿಯಾ ಪರ ವಕೀಲ ಆಕರ್ಷ್ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಇದೇ ವೇಳೆ ಕಾರ್ತಿಕ್ ವಿರುದ್ಧ ನ್ಯಾಯಾಲಯ ಹೊರಡಿಸಿದ್ದ ಬಂಧನ ವಾರಂಟ್ ಆರ್‌ಟಿನಗರ ಪೊಲೀಸರ ಕೈ ಸೇರಿದ್ದು, ನಾಳಿನ ನ್ಯಾಯಾಲಯದ ಕಲಾಪದ ನಂತರ ಕಾರ್ತಿಕ್ ಅವರ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.