ಅತ್ಯಾಚಾರಿಗಳ ಕೈ ಕತ್ತರಿಸಿ: ಪ್ರಮೋದ್ ಮುತಾಲಿಕ್

ರಾಯಚೂರು: ದಿನೇ ದಿನೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದು, ಇದರ ವಿರುದ್ಧ ಕಿಡಿಕಾರಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಅತ್ಯಾಚಾರಿಗಳ ಕೈ ಕತ್ತರಿಸಿ ಎಂಬ ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಹೊರತು ಅತ್ಯಾಚಾರಿಗಳಿಗೆ ಶಿಕ್ಷೆಯಾಗುತ್ತಿಲ್ಲ ಇದರಿಂದಾಗಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಬೇಕಾದರೆ ಮೊದಲು ಅತ್ಯಾಚಾರದಿಂದ ನೊಂದವರ ಹೆತ್ತವರು ಅತ್ಯಾಚಾರಿಗಳ ಕೈ ಕತ್ತರಿಸಬೇಕು ಇಂತಹ ಕೃತ್ಯಕ್ಕೆ ಶ್ರೀರಾಮಸೇನೆ ಬೆಂಬಲ ನೀಡುತ್ತದೆ ಎಂದಿದ್ದಾರೆ.
ಇದೇ ವೇಳೆ, ಪಾಕಿಸ್ತಾನ ವಿರುದ್ಧ ಗರಂ ಆದ ಮುತಾಲಿಕ್, ಗಡಿಯಲ್ಲಿ ಪಾಕ್ ಸೈನಿಕರು ಪುಂಡಾಟಿಕೆ ನಡೆಸುತ್ತಿದ್ದರು ಇದಕ್ಕೆ ಭಾರತ ತಕ್ಕ ಉತ್ತರ ನೀಡುತ್ತಿಲ್ಲ ಇದರಿಂದಾಗಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಸಹ ಗುಂಡಿನ ದಾಳಿ ನಡೆಸಿ ಪಾಕ್ಗೆ ತಕ್ಕ ಉತ್ತರ ನೀಡಬೇಕು ಎಂದರು.
ಅಲ್-ಖೈದಾ ಉಗ್ರ ಸಂಘಟನೆ ಭಾರತದಲ್ಲಿ ವಿಸ್ತರಿಸುವುದಾಗಿ ಅಲ್-ಖೈದಾ ಮುಖಂಡ ಜವಾಹಿರಿ ಬೆದರಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಮುತಾಲಿಕ್, ಅಲ್-ಖೈದಾ ಉಗ್ರರು ದೇಶದೊಳಗೆ ನುಗ್ಗದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


