ಶಿಕ್ಷಣ ಇಲಾಖೆಗೆ ಕಿಮ್ಮನೆ ಸರ್ಜರಿ

ಆಡಳಿತದಲ್ಲಿ ಪಾರದರ್ಶಕತೆ ತರಲು ಹೊಸ ಕಾನೂನು ಜಾರಿ
ಮೈಸೂರು: ರಾಜ್ಯದ ಒಟ್ಟು 6 ಲಕ್ಷ ಸರ್ಕಾರಿ ನೌಕರರ ಪೈಕಿ ಶಿಕ್ಷಣ ಇಲಾಖೆಯವರೆ 3 ಲಕ್ಷ ಮಂದಿ ಇದ್ದಾರೆ. ಹೀಗಾಗಿ ನಮ್ಮ ಇಲಾಖೆಯಲ್ಲಿ ಉತ್ತಮ ಆಡಳಿತ, ಗುಣಮಟ್ಟದ ಕಾರ್ಯಪ್ರವೃತ್ತಿ ಹಾಗೂ ಪಾರದರ್ಶಕತೆ ಕಾಪಾಡುವ ಸಂಬಂಧ ಹೊಸ ಹೊಸ ಕಾನೂನು ಜಾರಿಗೆ ತರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು, ಹಳಿಯಾಳ, ಚಿಕ್ಕೋಡಿ, ಎಚ್.ಡಿ. ಕೋಟೆಯಂತ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಲು ಶಿಕ್ಷಕರು ಹಿಂದೇಟು ಹಾಕುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಪ್ರದೇಶಗಳಿಗೆ ನಿಯುಕ್ತಿಗೊಳ್ಳುವ ಶಿಕ್ಷಕರಿಗೆ ಕನಿಷ್ಠ 10 ವರ್ಷ ಅಲ್ಲಿಯೇ ಕರ್ತವ್ಯ ನಿರ್ವಹಿಸಲು ನಿಯಮ ರೂಪಿಸಲಾಗಿದೆ ಎಂದರು.
ಇನ್ನು ವರ್ಗಾವಣೆ ವಿಚಾರಕ್ಕೆ ಬಂದರೆ ಡಿಡಿಪಿಐ ಹಾಗೂ ಬಿಇಒಗಳು ಒಂದೇ ಪ್ರದೇಶದಲ್ಲಿ ಮೂರು ವರ್ಷಗಳಿಗಿಂತ ಹೆಚ್ಚು ಕಾಲ ಕಾರ್ಯನಿರ್ವಹಿಸುವಂತಿಲ್ಲ. ಬೇರೆಡೆಗೆ ವರ್ಗ ಮಾಡಲಾಗುವುದು. ಈ ಹಿಂದೆ ಶಿಕ್ಷಕರ ವರ್ಗಾವಣೆಯಲ್ಲಿ ಭ್ರಷ್ಟಾಚಾರವಿತ್ತು. ಇದನ್ನು ತಪ್ಪಿಸಲು ಅನ್ಲೈನ್ ಪದ್ಧತಿಯನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ. ಅದರಲ್ಲೂ ಅನಾರೋಗ್ಯ ಸಮಸ್ಯೆ ಹೇಳಿ, ಬೋಗಸ್ ಪ್ರಮಾಣಪತ್ರ ನೀಡುತ್ತಿರುವವರ ಮೇಲೆ ಕಣ್ಣಿಡಲಾಗಿದೆ. ಸಿಕ್ಕಿಹಾಕಿಕೊಂಡವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


