ಜಿಲ್ಲಾ ಸುದ್ದಿ

ಸೆ.8ರಂದು ನಿತ್ಯಾನಂದ ಪುರುಷತ್ವ ಪರೀಕ್ಷೆ

ಸೆ.8ರಂದು ನಿತ್ಯಾನಂದ ಪುರುಷತ್ವ ಪರೀಕ್ಷೆ
Published On :

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನನ್ನು ಇದೇ ಸೆ.8 ಸೋಮವಾರದಂದು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಆಶ್ರಮದಲ್ಲಿ ರಾಸಲೀಲೆ ನಡೆಸಿದ ಆರೋಪ ಎದುರಿಸುತ್ತಿರುವ ನಿತ್ಯಾನಂದ ಸ್ವಾಮಿ ಪುರುಷತ್ವ ಪರೀಕ್ಷೆಗೆ ಒಳಪಡಲೇಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದ ಹಿನ್ನಲೆಯಲ್ಲಿ ಸೋಮವಾರ ವೈದ್ಯಕೀಯ ಪರೀಕ್ಷೆ ನಡೆಸಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿತ್ಯಾನಂದನ ಪುರುಷತ್ವ ಪರೀಕ್ಷೆ ನಡೆಯಲಿದ್ದು, ಈಗಾಗಲೇ ಈ ಸಂಬಂಧ ನಿತ್ಯಾನಂದನಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ನಿತ್ಯಾನಂದ ಪುರುಷತ್ವ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಪ್ರಮುಖ ವೈದ್ಯರನ್ನು ನಿಯೋಜನೆ ಮಾಡಲಾಗಿದ್ದು, ನಿತ್ಯಾನಂದನ ರೋಮ, ಚರ್ಮ, ಬೆವರು ಮತ್ತು ಕೆಲ ಖಾಸಗಿ ಅಂಗಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಆ ಮೂಲಕ ನಿತ್ಯಾನಂದ ಲೈಂಗಿಕ ಕ್ರಿಯೆಗೆ ಅರ್ಹನಾಗಿದ್ದಾನೆಯೇ ಅಥವಾ ಇಲ್ಲವೇ ಎಂಬುದನ್ನು ವೈದ್ಯರು ಖಚಿತಪಡಿಸಿಕೊಳ್ಳಲ್ಲಿದ್ದಾರೆ.

ಬಿಡದಿಯಲ್ಲಿರುವ ನಿತ್ಯಾನಂದಾಶ್ರಮದಲ್ಲಿ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪದ ಮೇರೆಗೆ ನಿತ್ಯಾಂದನನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಅಲ್ಲದೆ ತಾನು ಗಂಡಸೂ ಅಲ್ಲ, ಹೆಂಗಸೂ ಅಲ್ಲ. ಹೀಗಾಗಿ ನನಗೆ ಲೈಂಗಿಕ ಕ್ರಿಯೆ ನಡೆಸುವ ಸಾಮರ್ಥ್ಯವಿಲ್ಲ ಎಂದು ನಿತ್ಯಾನಂದ ಹೇಳಿದ್ದು, ಅದನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆ ಅನಿವಾರ್ಯ ಎಂದು ಸರ್ಕಾರದ ಪರ ವಕೀಲರು ತಮ್ಮ ವಾದವನ್ನು ಮಂಡಿಸಿದ್ದರು.

ಹೀಗಾಗಿ ಸೆ.3ರಂದು ತನ್ನ ತೀರ್ಪು ಪ್ರಕಟಿಸಿದ್ದ ಸುಪ್ರೀಂಕೋರ್ಟ್ ನಿತ್ಯಾನಂದನಿಗೆ ಪುರುಷತ್ವ ಪರೀಕ್ಷೆ ಅಗತ್ಯ ಎಂದು ಹೇಳಿತ್ತು. ಅಲ್ಲದೆ ಶೀಘ್ರದಲ್ಲಿಯೇ ವೈದ್ಯಕೀಯ ಪರೀಕ್ಷೆ ನಡೆಸುವಂತೆ ವಿಚಾರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳಿಗೆ ಸೂಚಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.