ಕೋಲಾರದ ಸಮೀಪ ಭೀಕರ ಅಪಘಾತ: 13 ಸಾವು

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಕೋಲಾರದ ಸಮೀಪ ಭೀಕರ ಅಪಘಾತ: 13 ಸಾವು
Updated on: 

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಮುಳಬಾಗಿಲು ತಾಲ್ಲೂಕಿನ ಸಮೀಪ ಕಪ್ಪಲಮಡಗು ಗ್ರಾಮದ ಬಳಿ ಮರುಳು ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಐವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು. ಗಾಯಾಳುಗಳನ್ನು ಕೂಡಲೇ ಸಮೀಪದ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ಮತ್ತು ಆರ್‌ಎಲ್ ಜಾಲಪ್ಪ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ 15 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದ್ದು, ಈ ಪೈಕಿ 9 ಮಂದಿ ಆಸ್ಪತ್ರೆಯಲ್ಲಿಯೇ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತುಮಕೂರು ಡಿಪೋಗೆ ಸೇರಿದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮರಳು ಲಾರಿಗೆ ಡಿಕ್ಕಿ ಹೊಡೆದಿತ್ತು. ಅತಿ ವೇಗವಾಗಿ ಚಲಿಸುತ್ತಿದ್ದ ಬಸ್, ಎದುರುಗಡೆ ಬರುತ್ತಿದ್ದ ಲಾರಿಗೆ ಡಿಕ್ಕಿಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಲ್ಲದೆ ಬಸ್‌ನಲ್ಲಿ ಸುಮಾರು 52 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ಸ್ಥಳೀಯರ ನೆರವು ಪಡೆದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮರಳು ಲಾರಿ ಚಾಲಕ ಮತ್ತು ಕ್ಲೀನರ್‌ಗೂ ಕೂಡ ಪೆಟ್ಟಾಗಿದ್ದು, ಅವರನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಅತಿ ವೇಗವೇ ಕಾರಣ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಿಂದ ಮುಳಬಾಗಿಲವರೆಗೂ ಚತುಷ್ಪಥ ರಸ್ತೆ ಇದ್ದು, ಮುಳಬಾಗಿಲಿನಿಂದ ರಸ್ತೆಗಳ ಕಿರಿದಾಗಿವೆ. ಇಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ರಸ್ತೆ ತುಂಬಾ ಹಳ್ಳ-ದಿಣ್ಣೆಗಳೇ ತುಂಬಿವೆ. ಹೀಗಾಗಿ ಇಲ್ಲಿ ದಿನನಿತ್ಯ ಒಂದಲ್ಲ ಒಂದು ರೀತಿಯ ಅಪಘಾತಗಳು ಸಾಮಾನ್ಯ ಎನ್ನುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com