ಕಾಶ್ಮೀರ ಪ್ರವಾಹ: ರಾಜ್ಯದ 250 ಮಂದಿ ಸಂಕಷ್ಟದಲ್ಲಿ

ಬೆಂಗಳೂರು: ಪ್ರವಾಹ ಪೀಡಿತ ಜಮ್ಮು-ಕಾಶ್ಮೀರದಲ್ಲಿ ರಾಜ್ಯದ 250 ಪ್ರವಾಸಿಗರು ಸಿಲುಕಿಕೊಂಡಿದ್ದು, ಸಂತ್ರಸ್ತರ ರಕ್ಷಣೆಗೆ ಸರ್ಕಾರ ತುರ್ತು ಕ್ರಮಕೈಗೊಂಡಿದೆ.
ಕನ್ನಡಿಗರ ರಕ್ಷಣೆಗಾಗಿ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರ ಜತೆ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಬ್ಬರು ಐಎಎಸ್ ಅಧಿಕಾರಿಗಳನ್ನು ಜಮ್ಮು-ಕಾಶ್ಮೀರಕ್ಕೆ ಕಳುಹಿಸಿಕೊಡಲಾಗುವುದು. ಜಮ್ಮು ಕಾಶ್ಮೀರ ಸರ್ಕಾರದ ಜತೆ ಸತತ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರವಾಹದಿಂದ ತೊಂದರೆಗೆ ಒಳಗಾದವರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ವಿಭಾಗದಲ್ಲಿ ಸಹಯಾವಾಣಿ ತೆರೆಯಲಾಗಿದ್ದು, 1070 ಮತ್ತು 22340676ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಕಂದಾಯ ಇಲಾಖೆ ಹಿರಿಯ ಅಧಿಕಾರಿ ಸರೋಜಮ್ಮ ಎಂಬುವರನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಕೆಲ ಮಾಹಿತಿಗಳ ಪ್ರಕಾರ, ಪ್ರವಾಹದಲ್ಲಿ ಸಿಲುಕಿಕೊಂಡಿರುವವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಇದುವರೆಗಿನ ಮಾಹಿತಿ ಪ್ರಕಾರ ಜಮ್ಮು-ಕಾಶ್ಮೀರದಲ್ಲಿ ಸಿಲುಕಿಕೊಂಡಿರುವ ರಾಜ್ಯದ ಪ್ರವಾಸಿಗರ ಪೈಕಿ ಮಂಗಳೂರಿನ 7 ಮಂದಿ, ಹುಬ್ಬಳ್ಳಿ, ಹಾವೇರಿ, ಚಿತ್ರದುರ್ಗದ ತಲಾ ಇಬ್ಬರನ್ನು ಬಿಟ್ಟರೆ ಉಳಿದವರು ಬೆಂಗಳೂರಿನವರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


