ಜಿಲ್ಲಾ ಸುದ್ದಿ

ಟ್ಯೂಷನ್‌ಗೆ ಬಂದ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

ಟ್ಯೂಷನ್‌ಗೆ ಬಂದ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ
Published On :

ಬೆಂಗಳೂರು: ಮನೆಪಾಠಕ್ಕೆ ಆಗಮಿಸಿದ್ದ ಶಾಲಾ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಶಿಕ್ಷಕ ಬಿಜು(30) ವಿರುದ್ಧ ಪೋಷಕರು ದೂರು ದಾಖಲಿಸಿದ್ದಾರೆ.

ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು, ಶಿಕ್ಷಕ ಬಿಜುನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಶಾಲಾ ಮಕ್ಕಳಿಗೆ ಟ್ಯೂಷನ್ ಮಾಡುತ್ತಿದ್ದ ಬಿಜು, ಕಳೆದ ಸೆಪ್ಟೆಂಬರ್ 3ರಂದು ಶಿಕ್ಷಕ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆತನ ಟ್ಯೂಷನ್ ಸೆಂಟರ್‌ಗೆ ಸುಮಾರು 8ರಿಂದ 10 ವಿದ್ಯಾರ್ಥಿಗಳು ಪಾಠಕ್ಕೆ ಆಗಮಿಸುತ್ತಿದ್ದರು.

ಅತ್ಯಾಚಾರಕ್ಕೊಳಗಾದ ಬಾಲಕಿ ಎಂದಿನಂತೆ ಟ್ಯೂಷನ್‌ಗೆ ಹೋಗಿ ಬಾಲಕಿ ಮನೆಗೆ ಬಂದಾಗ ಖಿನ್ನಳಾಗಿದ್ದಳು. ಈ ಬಗ್ಗೆ ಪಾಲಕರು ಆಕೆಯ ಬಳಿ ವಿಚಾರಿಸಿದಾಗ ಮೊದಲು ಆಕೆ ಏನನ್ನೂ ಹೇಳಲಿಲ್ಲ. ಬಳಿಕ ಬಾಲಕಿಯ ದೈಹಿಕ ಮತ್ತು ಮಾನಸಿಕ ಸ್ಥಿತಿಯನ್ನು ಗಮನಿಸಿದ ಪೋಷಕರು ಒತ್ತಾಯ ಮಾಡಿ ಕೇಳಿದಾಗ ಬಾಲಕಿ ತನ್ನ ಮೇಲಾದ ದೌರ್ಜನ್ಯದ ಕುರಿತು ಹೇಳಿದ್ದಾಳೆ. ತಕ್ಷಣವೇ ಪೋಷಕರು ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿದ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ವೈದ್ಯಕೀಯ ವರದಿಯಲ್ಲಿ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿರುವುದು ಸ್ಪಷ್ಟವಾಗಿದೆ. ಪ್ರಸ್ತುತ ಶಿಕ್ಷಕ ಬಿಜುನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಮತ್ತು ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.