ಜಿಲ್ಲಾ ಸುದ್ದಿ

ಬಯಲಾಯ್ತು ಕೈ ಬಣ ರಾಜಕೀಯ

ಬಯಲಾಯ್ತು ಕೈ ಬಣ ರಾಜಕೀಯ
Published On :

ಕನ್ನಡಪ್ರಭ ವಾರ್ತೆ, ಬೆಂಗಳೂರು ಸೆ.9
ನಿಗಮ ಮಂಡಳಿ ನೇಮಕ ಹಾಗೂ ಬಿಬಿಎಂಪಿ ಸದಸ್ಯರ ನಾಮನಿರ್ದೇಶನದಲ್ಲಿ ಮೂಲ ಕಾಂಗ್ರೆಸಿಗರಿಗೆ ಆದ್ಯತೆ ನೀಡಬೇಕು ಎಂದು ಯುವ ಕಾಂಗ್ರೆಸ್‌ನ ಮಾಜಿ ಸದಸ್ಯರು ನಡೆಸುತ್ತಿರುವ ಪ್ರತಿಭಟನೆ ಕಾಂಗ್ರೆಸ್‌ನ ಬಣ ರಾಜಕೀಯವನ್ನು ಬಯಲುಗೊಳಿಸಿದೆ.

ಬೆಂಗಳೂರು ನಗರದಲ್ಲಿ ಹರಿಪ್ರಸಾದ್ ಬಣ ಮತ್ತು ಉಳಿದ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಿಬಿಎಂಪಿ ನಾಮನಿರ್ದೇಶನದಲ್ಲಿ ಬಯಲಾಗಿದೆ. ಸಚಿವರಾದ ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಆರ್ ಸೀತಾರಾಮ್ ಬಣಕ್ಕೆ ನೇಮಕ ಸಂದರ್ಭದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಇದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಕಣ್ಣು ಕೆಂಪಗಾಗಿಸಿದೆ. ಸಿದ್ದರಾಮಯ್ಯಗೆ ಆಪ್ತರಾಗಿದ್ದರೂ ಸದಸ್ಯರ ನೇಮಕದ ಸಂದರ್ಭದಲ್ಲಿ ಅವರ ಮಾತು ನಡೆದಿಲ್ಲ. ಮಲ್ಲೇಶ್ವರಂನಲ್ಲಿ ಅವರ ಸಹೋದರ ಬಿ.ಕೆ ಶಿವರಾಂ ಅವರು ಮಾಡಿದ್ದ ಶಿಫಾರಸು ಬಿಟ್ಟು ಸೀತಾರಾಮ್ ಬೆಂಬಲಿಗರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕೋಪಗೊಂಡಿರುವ ಹರಿಪ್ರಸಾದ್ ತೆರೆಮರೆಯಲ್ಲಿದ್ದುಕೊಂಡೆ ವಿರೋಧಕ್ಕೆ ಚಾಲನೆ ನೀಡಿದ್ದಾರೆ.

ತಮ್ಮ ಬೆಂಬಲಿಗ ಯುವ ಕಾಂಗ್ರೆಸ್ ಮಾಜಿ ಸದಸ್ಯರಾದ ಮನೋಹರ್, ಪ್ರಮೋದ್ ಶಂಕರ್ ಮೊದಲಾದವರ ಮೂಲಕ ಕೆಪಿಸಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಯಲ್ಲಿ ತಮ್ಮನ್ನು ಮೂಲ ಕಾಂಗ್ರೆಸಿಗರೆಂದು ಬಿಂಬಿಸಿಕೊಳ್ಳಲಾಗಿತ್ತು. ಮಂಗಳವಾರ ಮುಖ್ಯಮಂತ್ರಿ ನಿವಾಸದೆದುರು ಪ್ರತಿಭಟನೆ ನಡೆದಿರುವುದಕ್ಕೂ ಹರಿಪ್ರಸಾದ್ ಅವರ ಮುನಿಸೇ ಕಾರಣ ಎಂದು ತಿಳಿದು ಬಂದಿದೆ.

ನಿಗಮ ಮಂಡಳಿ ನೇಮಕದಲ್ಲಾದರೂ ತಮ್ಮ ಬಣಕ್ಕೆ ಹೆಚ್ಚಿನ ಆದ್ಯತೆ ಸಿಗುವಂತೆ ಮಾಡಬೇಕೆಂಬುದು ಇದರ ಹಿಂದಿನ ಉದ್ದೇಶ ಎನ್ನಲಾಗುತ್ತಿದೆ.

ಹರಿಪ್ರಸಾದ್ ಮತ್ತು ಬೆಂಗಳೂರಿನ ಉಳಿದ ಕಾಂಗ್ರೆಸ್ ಮುಖಂಡರ ನಡುವೆ ಹಿಂದಿನಿಂದಲೂ ಭಿನ್ನಾಭಿಪ್ರಾಯವಿದೆ.

ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸುವ ಸಚಿವರ ವಿರುದ್ಧ ಹರಿಪ್ರಸಾದ್ ಹರಿಹಾಯ್ದಿದ್ದರು. ಈಗ ಅದೇ ಪರಿಸ್ಥಿತಿ ಸೃಷ್ಟಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.