ಜಿಲ್ಲಾ ಸುದ್ದಿ

ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶ: 5 ಸಾವು

ಟ್ರಾಕ್ಟರ್‌ಗೆ ವಿದ್ಯುತ್ ತಂತಿ ಸ್ಪರ್ಶ: 5 ಸಾವು
ಸಾಂದರ್ಭಿಕ ಚಿತ್ರ
Published On :

ದೊಡ್ಡಬಳ್ಳಾಪುರ: ಗಣಪತಿ ವಿಸರ್ಜನೆ ಮುಗಿಸಿ ಟ್ರಾಕ್ಟರ್‌ನಲ್ಲಿ ಮರಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶವಾಗಿ 5 ಮಂದಿ ಯುವಕರು ದುರ್ಮರಣ ಹೊಂದಿದ್ದಾರೆ.

ದೊಡ್ಡಬಳ್ಳಾಪುರದ ಚಿಕ್ಕ ಮಧುರೆ ಗ್ರಾಮದಲ್ಲಿ ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಗಣೇಶ ವಿಸರ್ಜನೆ ಮುಗಿಸಿ ಹಿಂತಿಗುತ್ತಿದ್ದಾಗ ಈ ಘಟನೆ ನಡೆದಿದ್ದು 5 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತಪಟ್ಟವರನ್ನು  ನಾಗೇಶ್, ದರ್ಶನ್, ಅಂಜನ್, ಪವನ್, ಅರುಣ್ ಎಂದು ಗುರುತಿಸಲಾಗಿದ್ದು, ಅವರೆಲ್ಲೂ 20 ರಿಂದ 25 ವರ್ಷದ ಒಳಗಿನವರಾಗಿದ್ದಾರೆ.

ದೊಡ್ಡ ಬೆಳವಂಗಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.