ಜಿಲ್ಲಾ ಸುದ್ದಿ

ಬಜ್ಪೆ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ

ಬಜ್ಪೆ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ
Published On :

ಮಂಗಳೂರು: ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದು, ಶಂಕಿತ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ರಾತ್ರಿ ಶಂಕಿತ ಉಗ್ರ ಅಬ್ದುಲ್ ಖಾದರ್‌ನನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಆತನಿಂದ ಟ್ಯಾಬ್, ಅಮೋನಿಯಂ ನೈಟ್ರೇಟ್, ಬ್ಯಾಟರಿ ಮತ್ತಿತ್ತರ ಅಪಾಯಕಾರಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೂಲತಃ ಕಾಸರಗೋಡಿನ ಉಪ್ಪಾಳ ನಿವಾಸಿಯಾದ ಅಬ್ದುಲ್ ಖಾದರ್ ಕಣ್ಣೂರಿನ ವಿಳಾಸ ನೀಡಿ ಪಾಸ್‌ಪೋರ್ಟ್ ಪಡೆದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದು, ಎಸಿಪಿ ರವಿಕುಮಾರ್ ಅವರ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆಯೇ ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳದ ವಿಶೇಷ ತಂಡ ಮಂಗಳೂರಿಗೆ ತೆರಳಿದ್ದು, ಶಂಕಿತ ವಸ್ತುಗಳನ್ನು ತನಿಖೆಗೆ ಒಳಪಡಿಸಿದ್ದಾರೆ.

ತನಿಖೆ ವೇಳೆ ತನಗೆ ಯುವತಿಯೊಬ್ಬಳು ಎರಡು ಡಿಕ್ಷನರಿ ನೀಡಿ ಅದನ್ನು ಮತ್ತೊಬ್ಬರಿಗೆ ತುಲುಪಿಸಬೇಕೆಂದು ಕೇಳಿಕೊಂಡಿದ್ದಳು. ಹೀಗಾಗಿ ತಾನು ತನ್ನೊಂದಿಗೆ ಡಿಕ್ಷನರಿಗಳನ್ನು ತಂದಿರುವುದಾಗಿ ಖಾದರ್ ಹೇಳಿದ್ದಾನೆ. ಇದೇ ಡಿಕ್ಷನರಿಯಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು, ಸ್ಕ್ಯಾನಿಂಗ್ ವೇಳೆ ಇದು ಪತ್ತೆಯಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.