ಜಿಲ್ಲಾ ಸುದ್ದಿ

ಚರ್ಚೆ ಬಳಿಕ ಪುರುಷತ್ವ ವರದಿ

ಚರ್ಚೆ ಬಳಿಕ ಪುರುಷತ್ವ ವರದಿ
Published On :

ಬೆಂಗಳೂರು: ಬಿಡದಿ ನಿತ್ಯಾನಂದನ ಪುರುಷತ್ವ ಪರೀಕ್ಷೆ ವರದಿಯನ್ನು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಇನ್ನೆರಡು ದಿನಗಳಲ್ಲಿ ಸಿಐಡಿ ಅಧಿಕಾರಿಗಳಿಗೆ ಸಲ್ಲಿಸುವ ಸಾಧ್ಯತೆ ಇದೆ.

ನಿತ್ಯಾನಂದನ ಪುರುಷತ್ವ ಪರೀಕ್ಷೆ ವರದಿ ಸಿದ್ಧವಾಗುತ್ತಿದೆ. ಪರೀಕ್ಷೆ ನಡೆಸಿದ ವೈದ್ಯರ ಜತೆ ಸೋಮವಾರ ಬೆಳಗ್ಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿದ ನಂತರ ಸಂಜೆ ಅಥವಾ ಮಂಗಳವಾರ ಸಿಐಡಿ ಅಧಿಕಾರಿಗಳಿಗೆ ಒಪ್ಪಿಸಲಾಗುವುದು ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ಟಿ. ದುರ್ಗಣ್ಣ ತಿಳಿಸಿದರು.

ಸಹಿ ಹಾಕಲು ಹಿಂಜರಿಕೆ
ವೈದ್ಯ ಪರೀಕ್ಷೆ ಸಂದರ್ಭದಲ್ಲಿ ನಿತ್ಯಾನಂದ ಸನ್ಯಾಸಿ ಎಂದು ತಿಳಿದಿದ್ದರೂ ನೀಲಿ ಚಿತ್ರ ತೋರಿಸಿ ಆಸ್ಪತ್ರೆ ವೈದ್ಯರು ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ನಿತ್ಯಾನಂದ ಪರ ವಕೀಲರು, ಆಸ್ಪತ್ರೆ ವೈದ್ಯರು ಮತ್ತು ಸಿಐಡಿ ಡಿವೈಎಸ್‌ಪಿ ಲೋಕೇಶ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಈ ಹಿನ್ನಲೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಿದ ನಾಲ್ವರು ವೈದ್ಯರು ಅಂತಿಮ ವರದಿಗೆ ಸಹಿ ಹಾಕಲು ಹಿಂಜರಿಯುತ್ತಿದ್ದಾರೆ.

ತಮ್ಮ ತಮ್ಮ ವಿಭಾಗಗಳಲ್ಲಿ ನಡೆದ ವರದಿಗಳಿಗೆ ಮಾತ್ರ ಸಹಿ ಹಾಕುವುದಾಗಿ ಹೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.  ಹೀಗಾಗಿ ವರದಿ ಸಲ್ಲಿಕೆ ಮುಂದೂಡುವ ಸಾಧ್ಯತೆಯೂ ಇದೆ.

ವರದಿಯನ್ನು ಸಮಗ್ರವಾಗಿ ನೀಡುವ ಬದಲು ಪ್ರತ್ಯೇಕವಾಗಿ ವಿಭಾಗ ವಾರು ಸಲ್ಲಿಕೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.