2 ತಿಂಗಳಲ್ಲಿ ಶಾಲೆಗಳಲ್ಲಿ ಸಿಸಿಟಿವಿ

ಬೆಂಗಳೂರು: ನಗರದಲ್ಲಿರುವ ಸರ್ಕಾರಿ ಹಾಗೂ ಬಿಬಿಎಂಪಿ ಶಾಲೆಗಳಲ್ಲಿ ಇನ್ನೆರಡು ತಿಂಗಳಲ್ಲಿ ಹಂತಹಂತವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದಾಗಿ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಶಾಲಾ ಮಕ್ಕಳ ಸುರಕ್ಷೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಡ್ಡಾಯವಾಗಿ ಪಾಲಿಸಬೇಕಾದ 18 ಮಾರ್ಗಸೂಚಿಗಳ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಶಾಲಾ ಆಡಳಿತ ಒಕ್ಕೂಟ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ವೇಣುಗೋಪಾಲ್ ಗೌಡ ಅವರ ಪೀಠ, ಅನುದಾನಿತ ಶಾಲೆಗಳಿಗೆ ನಿಗದಿತ ಕಾಲಾವಕಾಶ ನೀಡಿ ಮಾರ್ಗಸೂಚಿ ಪಾಲಿಸದ ಶಾಲೆಗಳಿಗೆ ಸರ್ಕಾರ ನೀಡುತ್ತಿರುವ ಅನುದಾನ ತಡೆಹಿಡಿಯುವಂತೆ ಸೂಚಿಸಿದೆ.
ಖಾಸಗಿ ಶಾಲೆಗಳಲ್ಲಿ ಮಾರ್ಗಸೂಚಿ ಪಾಲಿಸಲು ಪೀಠ ಒಂದು ತಿಂಗಳ ಕಾಲಾವಕಾಶ ನೀಡಿದೆ.
ಮಾರ್ಗಸೂಚಿ ಪಾಲಿಸದ 186 ಶಾಲೆಗಳ ವಿರುದ್ಧ ಈಗಾಗಲೇ ಪೊಲೀಸ್ ಇಲಾಖೆ ಎಫ್ಐಆರ್ ದಾಖಲಿಸಿದ್ದು ಆಡಳಿತ ಮಂಡಳಿ ವಿರುದ್ಧ ದೋಷಾರೋಪ ಪಟ್ಟಿ ದಾಖಲಿಸದಂತೆ ಪೊಲೀಸರಿಗೆ ಸೂಚಿಸಿ, ಮಾರ್ಗಸೂಚಿ ಪಾಲಿಸಲು ಕ್ರಮ ತೆಗೆದುಕೊಳ್ಳದ ಶಾಲೆಗಳ ವಿರುದ್ದ ಎಫ್ಐಆರ್ ದಾಖಲಿಸುವಂತೆ ಪೀಠ ನಿರ್ದೇಶಿಸಿದೆ.
ವಿಚಾರಣೆ ವೇಳೆ ಖುದ್ದು ಹಾಜರಾದ ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಶಾಲೆಗಳಲ್ಲಿ ಮಾರ್ಗಸೂಚಿ ಪಾಲಿಸುವ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಪೀಠಕ್ಕೆ ತಿಳಿಸಿದರು.
ಶಾಲಾ ಮಕ್ಕಳ ಸುರಕ್ಷೆಗೆ ಈಗಾಗಲೇ ನೋಡಲ್ ಅಧಿಕಾರಿಯನ್ನು ನೇಮಿಸಿದ್ದು ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರ ಜತೆ ತಿಂಗಳಿಗೊಮ್ಮೆ ಚರ್ಚೆ ನಡೆಸುವಂತೆ ಪೀಠ ಸಲಹೆ ನೀಡಿತು.
ಮಾರ್ಗಸೂಚಿಗೆ ಸಂಬಂಧಿಸಿದಂತೆ ಎಲ್ಲ ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಪ್ರತ್ಯೇಕ ಗುರುತಿನ ಚೀಟಿ ನೀಡಿ ಅದರ ವೆಚ್ಚವನ್ನು ಪೋಷಕರಿಂದ ಭರಿಸಿಕೊಳ್ಳುವಂತೆ ಇದೇ ವೇಳೆ ಏಕಸದಸ್ಯ ಪೀಠ ಆದೇಶಿಸಿ ನ.11ಕ್ಕೆ ವಿಚಾರಣೆ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


